ಭೋಪಾಲ್: 17 ವರ್ಷದ ಬುಡಕಟ್ಟು ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ವೆಸಗಿ ಆಕೆಯ ಮುಖವನ್ನು ಆರೋಪಿಗಳು ಕ್ರೂರವಾಗಿ ಕಚ್ಚಿ ಗಾಯಗೊಳಿಸಿರುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ.
ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಸಂತ್ರಸ್ತೆ ತನ್ನ ಸೋದರ ಸಂಬಂದಿಯೊಂದಿಗೆ ಜಾತ್ರೆಯಿಂದ ಮನೆಗೆ ಹಿಂದಿರುಗುತ್ತಿದ್ದ ವೇಳೆ ಮೂವರು ಆರೋಪಿಗಳು ಆಕೆಯನ್ನು ಅಪಹರಿಸಿದ್ದಾರೆ. ನಂತರ ಆಕೆಯನ್ನು ನಿರ್ಜನ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ.
ನಂತರ ಸಂತ್ರಸ್ತೆ ಭಾನುವಾರ ಮಧ್ಯರಾತ್ರಿಯೇ ಅಲ್ಲಿಂದ ತಪ್ಪಿಸಿಕೊಂಡು ತನ್ನ ಸಂಬಂಧಿಕರಿರುವ ಸ್ಥಳಕ್ಕೆ ತಲುಪಿದ್ದು, ಸೋಮವಾರ ಆಕೆಯ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಯಾವುದೇ ಒತ್ತಡವಿಲ್ಲ, ಸ್ವ-ಇಚ್ಛೆಯಿಂದ ಆತ್ಮಹತ್ಯೆ- ಸೆಲ್ಫಿ ವೀಡಿಯೋ ಮಾಡಿ ಯುವಕ ಬಾವಿಗೆ ಹಾರಿದ!
ಈ ಘಟನೆ ಸಂಬಂಧ ಇದೀಗ ಪೊಲೀಸರು 22 ವರ್ಷದ ವ್ಯಕ್ತಿ ಹಾಗೂ 16, 17 ವರ್ಷದ ಇಬ್ಬರು ಹುಡುಗರನ್ನು ಬಂಧಿಸಿದ್ದಾರೆ. ಸದ್ಯ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಸಾಮೂಹಿಕ ಅತ್ಯಾಚಾರ, ಅಪಹರಣ, ಬೆದರಿಕೆ, ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವ(ಪೋಕ್ಸೋ) ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬಾಲಕಿಯ ವೈದ್ಯಕೀಯ ಪರೀಕ್ಷೆ ವೇಳೆ ಅಪರಾಧ ಧೃಡವಾಗಿದ್ದು, ಮೂವರು ಆರೋಪಿಗಳು ಮತ್ತು ಸಂತ್ರಸ್ತೆ ಒಂದೆ ಬುಡಕಟ್ಟು ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಘಟನೆ ಬಳಿಕ ಹುಡುಗಿಯ ಪೋಷಕರು ಪ್ರಮುಖ ಆರೋಪಿಯನ್ನು ಮದುವೆಯಾಗುವಂತೆ ಪ್ರಮುಖ ಆರೋಪಿಯನ್ನು ಕೇಳಿದ್ದು, ಆತ ಮದುವೆಯಾಗಲು ನಿರಾಕರಿಸಿದ್ದಾನೆ. ಇದೀಗ ಸಂತ್ರಸ್ತೆ ಕುಟುಂಬ ಮೂವರ ವಿರುದ್ಧವೂ ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಫಿಟ್ನೆಸ್‍ಗಾಗಿ ತಂದೆ ಜೊತೆ ಸೈಕ್ಲಿಂಗ್ – ಬಾಲಕನಿಗೆ ಡಿಕ್ಕಿ ಹೊಡೆದ ಟ್ರಕ್