ಪಾಟ್ನಾ: ಚಲಿಸುತ್ತಿದ್ದ ಬಸ್‌ನಲ್ಲೇ 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬಿಹಾರದಲ್ಲಿ ಬೆಳಕಿಗೆ ಬಂದಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಸ್ ಚಾಲಕ, ನಿರ್ವಾಹಕ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ ಬಸ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕೋರ್ಟ್ ವಿಚಾರಣೆ ವೇಳೆ ಬಿಟ್ರು ನೂರಾರು ಜಿರಳೆ
- Advertisement
ಏನಿದು ಘಟನೆ?: ಪಶ್ಚಿಮ ಚಂಪಾರಣ್‌ನಲ್ಲಿರುವ ಬೆತಿಯಾಗೆ ಪ್ರಯಾಣಿಸಲು ಬಾಲಕಿ ಚಂಪಾರಣ್ ಜಿಲ್ಲೆಯ ಮೋತಿಹಾರಿ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದಳು. ಈ ವೇಳೆ ಬಸ್ ಚಾಲಕ ಬೆತಿಯಾಗೆ ಹೋಗುವುದಾಗಿ ಬಾಲಕಿಯನ್ನು ಬಸ್‌ಗೆ ಹತ್ತಿಸಿಕೊಂಡಿದ್ದಾನೆ. ಬಸ್ ಸಂಚರಿಸುವ ವೇಳೆ ಆರೋಪಿಗಳು ಬಾಲಕಿಗೆ ಪ್ರಜ್ಞೆ ತಪ್ಪಿಸುವ ಪಾನಿಯಾ ಕುಡಿಸಿ, ಬಳಿಕ ಅತ್ಯಾಚಾರ ಎಸಗಿದ್ದಾರೆ ಎಂದು ಬೆತಿಯಾ ಉಪವಿಭಾಗೀಯ ಪೊಲೀಸ್ ಅಧಿಕಾರಿ ಮುಕುಲ್ ಪಾಂಡೆ ಮಾಹಿತಿ ನೀಡಿದ್ದಾರೆ.
- Advertisement
ಬಾಲಕಿ ಎಚ್ಚರಗೊಂಡಾಗ ಬಸ್ ಒಳಗೆ ಬಂಧಿಯಾಗಿದ್ದಳು. ಆರೋಪಿಗಳು ಬಾಲಕಿಯನ್ನು ಬಸ್ ಒಳಗೇ ಕೂಡಿ ಹಾಕಿ ಪರಾರಿಯಾಗಿದ್ದಾರೆ. ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಜನರು ಬಸ್‌ನ ಬಾಗಿಲನ್ನು ತೆಗೆದು ನೋಡಿದ ಬಳಿಕ, ಬಾಲಕಿಯನ್ನು ರಕ್ಷಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಪಾಕ್‌ನಲ್ಲಿ ಪರ್ವತದಿಂದ ಕಮರಿಗೆ ಬಿದ್ದ ವ್ಯಾನ್ – 22 ಮಂದಿ ದುರ್ಮರಣ
ಸದ್ಯ ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಐಪಿಸಿ ಸೆಕ್ಷನ್ ಹಾಗೂ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.