ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಪಾಸಿಟಿವ್ ಕೇಸ್ಗಳ ಸಂಖ್ಯೆ 171ಕ್ಕೆ ಏರಿಕೆ ಕಂಡಿದೆ. ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಒಟ್ಟು 6 ಜಿಲ್ಲೆಗಳಲ್ಲಿ ಮಾತ್ರ ಕೇಸ್ ದಾಖಲಾಗಿದೆ.
Advertisement
ಬೆಂಗಳೂರಿನಲ್ಲಿ ಒಟ್ಟು 161 ಕೇಸ್ ದಾಖಲಾಗಿದ್ದು, ಉಳಿದಂತೆ 5 ಜಿಲ್ಲೆಗಳಲ್ಲಿ 10 ಕೇಸ್ ಮತ್ತು 24 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇಂದು ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ಇಂದು 121 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 0.84 ದಾಖಲಾಗಿದ್ದು, ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,827ಕ್ಕೆ ತಲುಪಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,064 ಮರಣ ಪ್ರಕರಣ ಪತ್ತೆಯಾಗಿದೆ. ಕೆಲದಿನಗಳಿಂದ ಮರಣ ಪ್ರಕರಣ ಸ್ಥಿರವಾಗಿದೆ. ಇದನ್ನೂ ಓದಿ: ಬೆಂಗ್ಳೂರು ಡ್ರೋನ್ ಹಾರಿಸಿ ಉತ್ಸವಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ
Advertisement
Advertisement
ಈವರೆಗೆ ರಾಜ್ಯದಲ್ಲಿ ಒಟ್ಟು 39,51,302 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,09,369 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 81,249 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 20,143 ಸ್ಯಾಂಪಲ್ (ಆರ್ಟಿಪಿಸಿಆರ್ 14,609 + 5,534 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಬದುಕಿರುವಾಗಲೆ ರೈತನಿಗೆ ಮರಣ ಪ್ರಮಾಣ ಪತ್ರ – ಗ್ರಾಮ ಲೆಕ್ಕಿಗ ಅಮಾನತು
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 161, ದಕ್ಷಿಣ ಕನ್ನಡ ಮತ್ತು ಮೈಸೂರಿನಲ್ಲಿ ತಲಾ 3, ಬೆಂಗಳೂರು ಗ್ರಾಮಾಂತರ 2, ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ತಲಾ ಒಂದೊಂದು ಪ್ರಕರಣ ಸೇರಿ ಒಟ್ಟು 171 ಪ್ರಕರಣ ವರದಿಯಾಗಿದೆ.