Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 1,763 ವೈದ್ಯರು, ವೈದ್ಯಾಧಿಕಾರಿಗಳ ನೇಮಕ, ಆರೋಗ್ಯ ವ್ಯವಸ್ಥೆಗೆ ಬಲ:ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 1,763 ವೈದ್ಯರು, ವೈದ್ಯಾಧಿಕಾರಿಗಳ ನೇಮಕ, ಆರೋಗ್ಯ ವ್ಯವಸ್ಥೆಗೆ ಬಲ:ಸುಧಾಕರ್

Bengaluru City

1,763 ವೈದ್ಯರು, ವೈದ್ಯಾಧಿಕಾರಿಗಳ ನೇಮಕ, ಆರೋಗ್ಯ ವ್ಯವಸ್ಥೆಗೆ ಬಲ:ಸುಧಾಕರ್

Public TV
Last updated: May 24, 2021 9:02 pm
Public TV
Share
3 Min Read
Sudhakar 3
SHARE

– ಉತ್ತರ ಕರ್ನಾಟಕ ಭಾಗದಲ್ಲಿ ವೈದ್ಯರ ಕೊರತೆ ನೀಗಿಸಲು ಕ್ರಮ
– ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ, ಸರ್ಕಾರ ಸಹಿಸುವುದಿಲ್ಲ

ಬೆಂಗಳೂರು: ರಾಜ್ಯದ ಆರೋಗ್ಯ ಕ್ಷೇತ್ರವನ್ನು ಬಲಪಡಿಸಲು ಒಟ್ಟು 1,763 ವೈದ್ಯರು ಹಾಗೂ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಕೋವಿಡ್, ಬ್ಲ್ಯಾಕ್ ಫಂಗಸ್ ಸ್ಥಿತಿಗತಿ ಕುರಿತು ಸಭೆ ನಡೆದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, 1,763 ವೈದ್ಯರನ್ನು ನೇರ ನೇಮಕಾತಿ ಮಾಡುವ ಪ್ರಕ್ರಿಯೆ ಮುಗಿದು ಅಧಿಸೂಚನೆ ಹೊರಡಿಸಲಾಗಿದೆ. 715 ತಜ್ಞರು, 75 ಜನರಲ್ ಮೆಡಿಸಿನ್, 57 ಜನರಲ್ ಸರ್ಜನ್, 145 ಗೈನಕಾಲಜಿಸ್ಟ್, 40 ಇಎನ್ ಟಿ, 35 ಚರ್ಮರೋಗ ತಜ್ಞರು, 142 ಅರವಳಿಕೆ ತಜ್ಞರು, 153 ಮಕ್ಕಳ ತಜ್ಞರು, 17 ರೇಡಿಯಾಲಜಿಸ್ಟ್ ಗಳನ್ನು ನೇಮಿಸಲಾಗುತ್ತಿದೆ. ಜೊತೆಗೆ 1,048 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ನೇಮಕ ಮಾಡಲಾಗುತ್ತಿದೆ. ಇದರಿಂದಾಗಿ ಆರೋಗ್ಯ ವ್ಯವಸ್ಥೆ ಬಲವಾಗಲಿದೆ ಎಂದರು.

FotoJet 1 30

ಉತ್ತರ ಕರ್ನಾಟಕ ಭಾಗದ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಹೆಚ್ಚಿದ್ದು, ಈಗ ಸಮಸ್ಯೆ ನೀಗಲಿದೆ. ಗದಗ, ಹುಬ್ಬಳ್ಳಿ, ಬೆಳಗಾವಿ, ರಾಯಚೂರು ಮೊದಲಾದ ಜಿಲ್ಲೆಗಳಿಗೆ ಮೊದಲ ಪ್ರಾಶಸ್ತ್ಯ ನೀಡಿ ಅಲ್ಲಿಗೆ ನೇಮಿಸಬೇಕೆಂದು ಸೂಚಿಸಲಾಗಿದೆ. ಶೀಘ್ರದಲ್ಲಿ ಸ್ಥಳ ನಿಯೋಜನೆ ಮಾಡಲಾಗುವುದು. ಇದಕ್ಕಾಗಿ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

1,200 ಟನ್ ಹಂಚಿಕೆ:
ರಾಜ್ಯಕ್ಕೆ 230 ಟನ್ ನಿಂದ ಆರಂಭಿಸಿ 1,015 ಟನ್ ಆಕ್ಸಿಜನ್ ಅನ್ನು ಕೇಂದ್ರ ಸರ್ಕಾರ ಹಂಚಿಕೆ ಮಾಡಿದೆ. ಈಗ ಮತ್ತಷ್ಟು ಏರಿಕೆ ಮಾಡಿ 1,200 ಟನ್ ಆಕ್ಸಿಜನ್ ಹಂಚಿಕೆ ಮಾಡಲಾಗಿದೆ. ಇದಕ್ಕಾಗಿ ಕೇಂದ್ರದ ಸಚಿವರಿಗೆ, ಪ್ರಧಾನಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಚಿವರು ತಿಳಿಸಿದರು.

Oxygen express Train bengaluru 3

ಎಲ್ಲ ಕೋವಿಡ್ ಆಸ್ಪತ್ರೆಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗುತ್ತಿದೆ. ಇದರಿಂದ ಸಂಬಂಧಿಕರು ಆರೈಕೆ ಹೇಗಾಗುತ್ತಿದೆ ಎಂದು ನೋಡಬಹುದು, ಹೊರಗಿನಿಂದ ಬರುವುದನ್ನು ತಪ್ಪಿಸುವುದರಿಂದ ಬ್ಲ್ಯಾಕ್ ಫಂಗಸ್ ನಿಯಂತ್ರಿಸಬಹುದು, ವೈದ್ಯರು ಸರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡಬಹುದು. ಪ್ರತಿ ಜಿಲ್ಲೆಯ ಆಸ್ಪತ್ರೆಗಳ ಕಾರ್ಯನಿರ್ವಹಣೆಯನ್ನು ಒಂದೇ ಕಡೆ ವೀಕ್ಷಿಸುವ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ ಎಂದರು.

ಆರೋಗ್ಯ ಸಹಾಯಕರಿಗೆ ಅಧಿಕಾರಿಗಳು ಎಂದು ಪದನಾಮ ಬದಲಿಸಲಾಗಿದೆ. ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ವೈದ್ಯರಿಗೆ 10 ಸಾವಿರ ರೂ., ನಸಿರ್ಂಗ್ ಸಿಬ್ಬಂದಿಗೆ 8 ಸಾವಿರ ರೂ., ಗ್ರೂಪ್ ಡಿ ಸಿಬ್ಬಂದಿಗೆ 10 ಸಾವಿರ ರೂ. ರಿಸ್ಕ್ ಭತ್ಯೆಯನ್ನು ಏಪ್ರಿಲ್ 1 ರಿಂದ ನೀಡಲು ಆದೇಶಿಸಲಾಗಿದೆ. ಆಶಾ ಕಾರ್ಯಕರ್ತರಿಗೆ ಪ್ರತಿ ತಿಂಗಳ ಮೊದಲ ವಾರದಲ್ಲೇ ವೇತನ ಪಾವತಿಸುವ ವ್ಯವಸ್ಥೆ ತರಲಾಗಿದೆ. 17 ಜಿಲ್ಲೆಗಳಲ್ಲಿ ವೇತನ ಸಂಪೂರ್ಣ ಸಿಕ್ಕಿದೆ. ಎರಡು ದಿನಗಳಲ್ಲಿ ಉಳಿದೆಡೆ ವೇತನ ಕೈ ಸೇರಲಿದೆ ಎಂದು ಸ್ಪಷ್ಟಪಡಿಸಿದರು.

Oxygen express Train bengaluru 2

ಬ್ಲ್ಯಾಕ್ ಫಂಗಸ್
ಈವರೆಗೆ ರಾಜ್ಯದಲ್ಲಿ 446 ಜನರು ಬ್ಲ್ಯಾಕ್ ಫಂಗಸ್ ಸೋಂಕಿಗೆ ಒಳಗಾಗಿದ್ದಾರೆ. 433 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 11 ಮಂದಿ ಮನೆಯಲ್ಲಿದ್ದು, ಆಸ್ಪತ್ರೆಗೆ ದಾಖಲಿಸಲು ಸೂಚಿಸಲಾಗಿದೆ. 12 ರೋಗಿಗಳು ಮೃತಪಟ್ಟಿದ್ದಾರೆ. ಈ ಸೋಂಕು ನಿವಾರಣೆಗೆ 1 ಸಾವಿರ ಔಷಧಿ ವೈಲ್ ಗಳು ಕೇಂದ್ರದಿಂದ ಸಿಗಲಿದೆ ಎಂದು ಸಚಿವರು ತಿಳಿಸಿದರು.

ರಾಜ್ಯದಲ್ಲಿ 555 ಬೇಸಿಕ್ ಆಂಬ್ಯುಲೆನ್ಸ್, 157 ಅಡ್ವಾನ್ಸ್ಡ್ ಆಂಬ್ಯುಲೆನ್ಸ್ ಇದೆ. 530 ವೆಂಟಿಲೇಟರ್ ಕೇಂದ್ರದಿಂದ ಬಂದಿದ್ದು, ಇದನ್ನು ಆಂಬ್ಯುಲೆನ್ಸ್ ಗೆ ಅಳವಡಿಸಲಾಗುವುದು. ಇದರಿಂದ ಎಲ್ಲಾ ಜಿಲ್ಲೆಗಳಿಗೆ ಅನುಕೂಲವಾಗಲಿದೆ. ಕೋವಿಡ್ ಮರಣ ಪ್ರಮಾಣ ಕಡಿಮೆ ಮಾಡಲು ಪ್ರತಿ ಜಿಲ್ಲೆಯಲ್ಲಿ ಟೆಲಿ ಐಸಿಯುನಲ್ಲಿ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಲು ಚರ್ಚಿಸಲಾಗಿದೆ.

Covishield

ಕೇಂದ್ರದಿಂದ ರಾಜ್ಯಕ್ಕೆ 1.05 ಕೋಟಿ ಡೋಸ್ ಕೋವಿಶೀಲ್ಡ್ ಬಂದಿದ್ದು, 13.54 ಲಕ್ಷ ನೇರ ಖರೀದಿ ಮಾಡಲಾಗಿದೆ. 13.10 ಲಕ್ಷ ಡೋಸ್ ಕೋವ್ಯಾಕ್ಸಿನ್ ನೇರ ಖರೀದಿ ಮಾಡಲಾಗಿದೆ. ಈವರೆಗೆ 1.22 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಸದ್ಯ 11.46 ಲಕ್ಷ ಡೋಸ್ ದಾಸ್ತಾನು ಇದೆ. ಪ್ರಾಶಸ್ತ್ಯದಲ್ಲಿ ಗುಂಪುಗಳನ್ನು ಮಾಡಿಕೊಂಡು ಲಸಿಕೆ ನೀಡಲಾಗುತ್ತಿದೆ.

ಸೇವೆಯಲ್ಲಿದ್ದ ಹೆಣ್ಣುಮಗಳ ಮೇಲೆ ಹಲ್ಲೆ ಖಂಡನೀಯ. ಆರೋಗ್ಯ ಸಿಬ್ಬಂದಿ ತಮ್ಮ ಪ್ರಾಣ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದಾರೆ. ಆರೋಗ್ಯ ಸಿಬ್ಬಂದಿ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಿದರೆ 5 ವರ್ಷಗಳ ಸೆರೆವಾಸ ಅನುಭವಿಸಬೇಕಾಗುತ್ತದೆ. ಇದನ್ನು ಸರ್ಕಾರ ಸಹಿಸುವುದಿಲ್ಲ. ಸರ್ಕಾರ ಗಂಭೀರ ಕ್ರಮ ಕೈಗೊಳ್ಳುತ್ತದೆ.

ಕೇಂದ್ರ ಸರ್ಕಾರದ ಕೋಟಾದಡಿಯಲ್ಲಿ ಇಂದು 3️⃣ ಲಕ್ಷ ಡೋಸ್ ಕೋವಿಶೀಲ್ಡ್ ಕರ್ನಾಟಕಕ್ಕೆ ಬಂದಿದೆ.
◾ಕೇಂದ್ರದಿಂದ ಪಡೆದ ಒಟ್ಟು ಕೋವಿಶೀಲ್ಡ್ ಪ್ರಮಾಣ 1.05 ಕೋಟಿ ಡೋಸ್.
◾ರಾಜ್ಯವು ನೇರವಾಗಿ ಖರೀದಿಸಿದ ಒಟ್ಟು ಕೋವಿಶೀಲ್ಡ್ ಪ್ರಮಾಣ 13.54 ಲಕ್ಷ ಡೋಸ್.
◾ರಾಜ್ಯವು ಪಡೆದ ಒಟ್ಟು ಕೋವಾಕ್ಸಿನ್ ಪ್ರಮಾಣ 13.10 ಲಕ್ಷ ಡೋಸ್.

— Dr Sudhakar K (@DrSudhakar_) May 24, 2021

TAGGED:CoronaCorona VirusCovid19karnatakaSudhakarಆರೋಗ್ಯಕರ್ನಾಟಕಕೊರೊನಾಕೋವಿಡ್ 19ಬೆಂಗಳೂರುಸುಧಾಕರ್
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

Double Murder
Bengaluru City

ಬೆಂಗಳೂರಲ್ಲಿ ಅಪ್ತಾಪ್ತನಿಂದ ಡಬಲ್‌ ಮರ್ಡರ್‌ – ಬೆಚ್ಚಿಬಿದ್ದ ಜನ

Public TV
By Public TV
38 seconds ago
CRIME
Crime

ಹಾಡಹಗಲೇ ಕತ್ತು ಕೊಯ್ದು ಪತ್ನಿಯ ಬರ್ಬರ ಹತ್ಯೆ – ಶವದ ಮೇಲೆ ಕಾರು ಹಾಯಿಸಿ ವಿಕೃತಿ, ಪತಿ ವಶಕ್ಕೆ

Public TV
By Public TV
47 minutes ago
Belagavi Ministers
Bagalkot

ಬೆಳಗಾವಿಯ ನಾಯಕರಿಗೆ ಉಪಕದನ ಗೆಲ್ಲಿಸುವ ಜವಾಬ್ದಾರಿ – ಕಾಂಗ್ರೆಸ್ ಹೈಕಮಾಂಡ್ ಆದೇಶ

Public TV
By Public TV
1 hour ago
Petrol 5
Bagalkot

ರಾಜ್ಯದಲ್ಲಿ ಪೆಟ್ರೋಲ್ ʻಹುಸಿ ಬಾಂಬ್ʼ ವದಂತಿ – ಪೆಟ್ರೋಲ್‌ಗೆ 300 ರೂಪಾಯಿ ಲಿಮಿಟ್

Public TV
By Public TV
2 hours ago
Koppal JE Suspend
Districts

ಲೋಕಾ ದಾಳಿ ವೇಳೆ 10 ಕೋಟಿ ಭ್ರಷ್ಟಾಚಾರ ಬಯಲು – ಕೊಪ್ಪಳ ನಗರಸಭೆಯ ಜೆಇ ಸಸ್ಪೆಂಡ್

Public TV
By Public TV
2 hours ago
biriyani
Bengaluru City

ಒಂದು ಸಿಲಿಂಡರ್ ಕೊಟ್ರೆ ತಿಂಗಳ ಪೂರ್ತಿ ಬಿರಿಯಾನಿ ಫ್ರೀ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?