ಲಕ್ನೋ: ಮೇ 1ರಿಂದ ಶುರುವಾಗುವ ಲಸಿಕೆ ವಿತರಣಾ ಅಭಿಯಾನಕ್ಕೆ ಉತ್ತರ ಪ್ರದೇಶ ಆರೋಗ್ಯ ಇಲಾಖೆ ಸಜ್ಜಾಗುತ್ತಿದೆ. ಇದರೊಟ್ಟಿಗೆ ಸರ್ಕಾರ ಸಾರ್ವಜನಿಕರಿಗೆ ಔಷಧ, ಹಾಸಿಗೆ, ಆಕ್ಸಿಜನ್ ಸೇರಿ ಇನ್ನಿತರ ಎಲ್ಲ ವ್ಯವಸ್ಥೆಗಳನ್ನೂ ನೀಡಲು ಸಿದ್ಧತೆ ಮಾಡಿಕೊಂಡಿದೆ. ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುವುದು ಉತ್ತರಪ್ರದೇಶ ಸರ್ಕಾರ ಘೋಷಣೆ ಮಾಡಿದೆ.
Advertisement
ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ರಾಜ್ಯಗಳಲ್ಲಿ ಲಾಕ್ಡೌನ್ ಹೇರಲಾಗಿದೆ. ಲಸಿಕಾ ಅಭಿಯಾನವು ನಡೆಯುತ್ತಿದೆ. ಈಗಾಗಲೇ ಹಿರಿಯ ನಾಗರಿಕರಿಗೆ, 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದ್ದು, ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೂ ಕೊರೊನಾ ಲಸಿಕೆ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಆದರೆ ಯೋಗಿ ಆದಿತ್ಯನಾಥ್ ಸರ್ಕಾರ ಉತ್ತರಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಲಸಿಕೆ ನೀಡಲು ಮುಂದಾಗಿದೆ.
Advertisement
प्यारे प्रदेशवासियों,
आज मंत्रिपरिषद की बैठक में यह निर्णय लिया गया है कि उत्तर प्रदेश में 18 वर्ष से अधिक आयु के सभी प्रदेशवासियों का कोरोना टीकाकरण @UPGovt द्वारा निःशुल्क कराया जाएगा।
कोरोना हारेगा, भारत जीतेगा…
— Yogi Adityanath (@myogiadityanath) April 20, 2021
Advertisement
ಮೇ 1ರಿಂದ ಶುರುವಾಗುವ ಲಸಿಕೆ ವಿತರಣಾ ಅಭಿಯಾನಕ್ಕೆ ಉತ್ತರ ಪ್ರದೇಶ ಉಚಿತ ಲಸಿಕೆ ನೀಡುತ್ತಿದೆ. ಸಾರ್ವಜನಿಕರಿಗೆ ಔಷಧ, ಹಾಸಿಗೆ, ಆಕ್ಸಿಜನ್ ಸೇರಿ ಇನ್ನಿತರ ಎಲ್ಲ ವ್ಯವಸ್ಥೆಗಳನ್ನೂ ನೀಡಲು ಸಿದ್ಧತೆ ಮಾಡಿಕೊಂಡಿದೆ. ಕೊರೊನಾ ಮಿತಿ ಮೀರುತ್ತಿರುವ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಕ್ಯಾಬಿನೆಟ್ ಸಚಿವರ ಸಭೆ ಕರೆದು ಚರ್ಚೆ ಮಾಡಿದ್ದಾರೆ. ಇದನ್ನು ಓದಿ:ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ
Advertisement