ಬೆಂಗಳೂರು: ರಾಜ್ಯ ಸರ್ಕಾರ ಖರೀದಿಸುತ್ತಿರುವ 2 ಕೋಟಿ ಡೋಸ್ ಕೋವಿಶೀಲ್ಡ್ ಪೈಕಿ ಶನಿವಾರ ರಾತ್ರಿ 3.5 ಲಕ್ಷ ಡೋಸ್ ರಾಜ್ಯಕ್ಕೆ ತಲುಪಿದ್ದು, ಈವರೆಗೂ ಒಟ್ಟು 6.5 ಲಕ್ಷ ಡೋಸ್ ಪೂರೈಕೆಯಾಗಿದೆ. ಹಾಗಾಗಿ ಮೇ 10 ರಿಂದ ರಾಜ್ಯಾದ್ಯಂತ 18 ರಿಂದ 44 ವರ್ಷ ವಯಸ್ಸಿನವರಿಗೆ ವ್ಯಾಕ್ಸಿನೇಷನ್ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಖರೀದಿಸುತ್ತಿರುವ 2 ಕೋಟಿ ಡೋಸ್ ಕೋವಿಶೀಲ್ಡ್ ಪೈಕಿ ಶನಿವಾರ ರಾತ್ರಿ 3.5 ಲಕ್ಷ ಡೋಸ್ ರಾಜ್ಯಕ್ಕೆ ತಲುಪಿದ್ದು, ಈವರೆಗೂ ಒಟ್ಟು 6.5 ಲಕ್ಷ ಡೋಸ್ ಪೂರೈಕೆಯಾಗಿದೆ.
ಕೇಂದ್ರ ಸರ್ಕಾರ ಈವರೆಗೂ 99,58,190 ಕೋವಿಶೀಲ್ಡ್, 10,91,280 ಕೋವ್ಯಾಕ್ಸಿನ್ ಸೇರಿ ಒಟ್ಟು 1,10,49,470 ಡೋಸ್ ಲಸಿಕೆಗಳನ್ನು ರಾಜ್ಯಕ್ಕೆ ಪೂರೈಕೆ ಮಾಡಿದೆ.
— Dr Sudhakar K (@mla_sudhakar) May 9, 2021
ಈ ಕುರಿತು ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಸುಧಾಕರ್, ಕೇಂದ್ರ ಸರ್ಕಾರ ಈವರೆಗೂ 99,58,190 ಕೋವಿಶೀಲ್ಡ್, 10,91,280 ಕೋವ್ಯಾಕ್ಸಿನ್ ಸೇರಿ ಒಟ್ಟು 1,10,49,470 ಡೋಸ್ ಲಸಿಕೆಗಳನ್ನು ರಾಜ್ಯಕ್ಕೆ ಪೂರೈಕೆ ಮಾಡಿದೆ. ಹಾಗಾಗಿ ಮೇ 10ನೇ ತಾರೀಖಿನಿಂದ 18 ರಿಂದ 44 ವರ್ಷ ವಯಸ್ಸಿನವರಿಗೆ ವ್ಯಾಕ್ಸಿನೇಷನ್ ನಡೆಯಲಿದೆ.
ಸೋಮವಾರ, ಮೇ 10ರಿಂದ ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್ ಸಿ.ವಿ.ರಾಮನ್ ಜನರಲ್, ಇಎಸ್ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ವಿತರಿಸಲಾಗುವುದು.
1/4
— Dr Sudhakar K (@mla_sudhakar) May 9, 2021
ಬೆಂಗಳೂರು ನಗರದ ಕೆಸಿ ಜನರಲ್, ಜಯನಗರ ಜನರಲ್ ಆಸ್ಪತ್ರೆ, ಸಿವಿ ರಾಮನಗರ ಆಸ್ಪತ್ರೆ, ಇಎಸ್‍ಐ ಆಸ್ಪತ್ರೆ ಮತ್ತು ಸರ್ಕಾರಿ ಮೆಡಿಕಲ್ ಕಾಲೇಜು ಗಳಲ್ಲಿ ಲಸಿಕೆ ವಿತರಣೆ ನಡೆಯಲಿದೆ. ಇದಲ್ಲದೇ ರಾಜ್ಯದ ಇತರೆಡೆ, ಎಲ್ಲಾ ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ ಮತ್ತು ಸರ್ಕಾರಿ ಮೆಡಿಕಲ್ ಕಾಲೇಜುಗಳಲ್ಲಿ ಲಸಿಕೆ ವಿತರಣೆ ಇರಲಿದೆ. ಇದರೊಂದಿಗೆ ರಾಜ್ಯದಲ್ಲಿ ವ್ಯಾಕ್ಸಿನೇಷನ್ ಸೆಂಟರ್ ಕೂಡ ಏರಿಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಇತರೆ ಜಿಲ್ಲೆಗಳಲ್ಲಿ ಆರಂಭಿಕವಾಗಿ ಜಿಲ್ಲಾಸ್ಪತ್ರೆಗಳು, ತಾಲ್ಲೂಕು ಆಸ್ಪತ್ರೆಗಳು ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಲಸಿಕೆ ವಿತರಣೆ ಮಾಡಲಾಗುವುದು. ಲಸಿಕೆ ಪೂರೈಕೆ ಹೆಚ್ಚಾಗುತ್ತಿದ್ದಂತೆ ಮುಂದಿನ ದಿನಗಳಲ್ಲಿ ಇನ್ನಷ್ಟು ಲಸಿಕಾ ಕೇಂದ್ರಗಳಲ್ಲಿ ವಿತರಣೆ ಆರಂಭಿಸಲಾಗುವುದು.
2/4
— Dr Sudhakar K (@mla_sudhakar) May 9, 2021
ಕೋವಿನ್ ಆ್ಯಪ್ ನಲ್ಲಿ ರಿಜಿಸ್ಟ್ರೇಶನ್ ಮಾಡಿಕೊಂಡಿದ್ದವರಿಗೆ ವ್ಯಾಕ್ಸಿನೇಷನ್ ನಡೆಯಲಿದ್ದು, ಆ್ಯಪ್ ರಿಜಿಸ್ಟ್ರೇಶನ್ ನಲ್ಲಿ ಯಾವ ದಿನಾಂಕ ವ್ಯಾಕ್ಸಿನೇಷನ್‍ಗೆ ನಿಗದಿ ಆಗಿರುತ್ತೋ ಅಂದೆ ಹೋಗಿ ವ್ಯಾಕ್ಸಿನ್ ಹಾಕಿಸಿಕೊಳ್ಳಬೇಕು. ಕೋವಿನ್ ಆ್ಯಪ್ ರಿಜಿಸ್ಟ್ರೇಶನ್ ಆಗಿರುವವರಿಗೆ ವ್ಯಾಕ್ಸಿನ್ ಸೆಂಟರ್ ಗೆ ಸ್ವಾಗತ ಎಂದು ಟ್ವೀಟ್ ಮಾಡಿದ್ದಾರೆ.