– ಎಟಿಎಂನಲ್ಲಿ ಸೆಕ್ಯುರಿಟಿ ಗಾರ್ಡ್ ಇಲ್ಲದನ್ನು ಗಮನಿಸಿ ಕಳ್ಳರ ಕೈಚಳಕ
ಕಲಬುರಗಿ: ಗ್ಯಾಸ್ ಕಟರ್ ಬಳಸಿ ಕಳ್ಳರು ಎಟಿಎಂನಿಂದ (ATM) 18 ಲಕ್ಷ ರೂ. ಕದ್ದೊಯ್ದಿರುವ ಘಟನೆ ಕಲಬುಗರಿಯ (Kalaburagi) ರಾಮನಗರದ (Ramanagara) ಬಳಿ ಇರುವ ಎಸ್‌ಬಿಐ (SBI) ಎಟಿಎಂಯಲ್ಲಿ ನಡೆದಿದೆ.
ಬುಧವಾರ ಸಂಜೆ 3 ಗಂಟೆ ಸುಮಾರಿಗೆ ಬ್ಯಾಂಕ್ ಸಿಬ್ಬಂದಿ ಎಟಿಎಂಗೆ ಹಣ ಹಾಕಿ ಹೋಗಿದ್ದರು. ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಎಟಿಎಂನಲ್ಲಿ ಸೆಕ್ಯೂರಿಟಿ ಇಲ್ಲದನ್ನು ಗಮನಿಸಿದ ಖದೀಮರು ಕನ್ನ ಹಾಕಿದ್ದಾರೆ. ಇದನ್ನೂ ಓದಿ: ಲೈನ್‍ಮೆನ್ ಬೈಕ್‍ಗೆ ಕಾರು ಡಿಕ್ಕಿ – ಸವಾರ ಹಾರಿ ಬಿದ್ರೂ ನಿಲ್ಲಿಸದೇ ಪರಾರಿಯಾದ ಚಾಲಕ
ಕಳ್ಳರು ಎಟಿಎಂನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳಿಗೆ ಬ್ಲಾಕ್ ಸ್ಪ್ರೇ ಮಾಡಿ ಗ್ಯಾಸ್ ಕಟ್ಟರ್‌ನಿಂದ ಎಟಿಎಂ ಮೆಷಿನ್ ಒಡೆದಿದ್ದಾರೆ. ಬಳಿಕ ಎಟಿಎಂನಲ್ಲಿದ್ದ 18 ಲಕ್ಷ ರೂ. ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಸತತ 2ನೇ ಬಾರಿ ರೆಪೋ ದರ ಕಡಿತ – ಇಳಿಕೆಯಾಗಲಿದೆ ಗೃಹ ಸಾಲ, ಇಎಂಐ
ಖದೀಮರು ಐ20 ಕಾರಿನಲ್ಲಿ ಬಂದು ಎಟಿಎಂ ದರೋಡೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಎಟಿಎಂನ ಬಳಿ ಐ20 ಕಾರು ನಿಂತಿರುವ ದೃಶ್ಯವು ಎಟಿಎಂ ಪಕ್ಕದಲ್ಲಿರೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.