ಹಾವೇರಿ: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ ಪತ್ತೆಯಾಗಿರುವ ಘಟನೆ ಹಾವೇರಿ ತಾಲೂಕಿನ ಹಾವನೂರು ಗ್ರಾಮದಲ್ಲಿ ನಡೆದಿದೆ.
ಮೃತ ಗೃಹಿಣಿಯನ್ನ 18 ವರ್ಷದ ಮಂಜವ್ವ ಹರಿಜನ ಎಂದು ಗುರುತಿಸಲಾಗಿದೆ. ಕಳೆದ ಕೆಲವು ತಿಂಗಳ ಹಿಂದೆ ಹಾವನೂರು ಗ್ರಾಮದ ಶಿವರಾಜನನ್ನು ಪ್ರೀತಿಸಿ ಮಂಜವ್ವ ಮದುವೆ ಆಗಿದ್ದಳು. ಆದರೆ ಬೆಳಗ್ಗೆ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
Advertisement
Advertisement
ಶಿವರಾಜ್ ಪ್ರತಿದಿನ ಮಂಜವ್ವಗೆ ಹೊಡೆಯುತ್ತಿದ್ದು, ಕಿರುಕುಳ ನೀಡುತ್ತಿದ್ದನು. ಆದ್ದರಿಂದ ನೊಂದು ಮಂಜವ್ವ ನೇಣಿಗೆ ಶರಣಾಗಿದ್ದಾಳೆ ಎಂದು ಹೇಳಲಾಗುತ್ತಿದೆ. ಆದರೆ ಪತಿ ಶಿವರಾಜ್ ಹಾಗೂ ಆತನ ಮನೆಯವರು ಸೇರಿ ಹೊಡೆದು ಕೊಲೆ ಮಾಡಿದ್ದಾರೆ. ಬಳಿಕ ಕೊಲೆ ಎಂದು ಯಾರಿಗೂ ತಿಳಿಯಬಾರದೆಂದು ನೇಣು ಬಿಗಿದುಕೊಂಡಂತೆ ಬಿಂಬಿಸಿದ್ದಾರೆ ಎಂದು ಮೃತಳ ಸಂಬಂಧಿಕರು ಆರೋಪಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಗುತ್ತಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement
ಈ ಘಟನೆ ಗುತ್ತಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv