Monday, 19th November 2018

Recent News

ಅರೆನಗ್ನ ಸ್ಥಿತಿಯಲ್ಲಿ 18 ವರ್ಷ ಪ್ರಾಯದ ಯುವತಿಯ ಶವ ಪತ್ತೆ

ಚಿಕ್ಕಬಳ್ಳಾಪುರ: ಮೋರಿಯ ಕೆಳಗೆ ಅರೆನಗ್ನ ಸ್ಥಿತಿಯಲ್ಲಿ ಸುಮಾರು 18 ವರ್ಷದ ವಯಸ್ಸಿನ ಯುವತಿ ಶವ ಪತ್ತೆಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು-ಗುಡಿಬಂಡೆ ಮಾರ್ಗದ ಸುಬ್ಬನಹಳ್ಳಿ ಬಳಿ ಶವ ಪತ್ತೆಯಾಗಿದೆ.

2-3 ದಿನಗಳ ಹಿಂದೆ ಕೊಲೆ ಮಾಡಿ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಮಾರ್ಗ ಮಧ್ಯದಲ್ಲಿ ವಾಸನೆ ಬಂದಾಗ ಸ್ಥಳೀಯರು ಏನು ಅಂತಾ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮೋರಿಯ ಕೆಳಗೆ ಯುವತಿಯ ಶವ ಪತ್ತೆಯಾಗಿದೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಚಿಕ್ಕಬಳ್ಳಾಪುರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಶವ ಪರೀಕ್ಷೆಗಾಗಿ ಮೃತದೇಹವನ್ನು ಗೌರಿಬಿದನೂರು ಸಾರ್ವಜನಿಕ ರವಾನಿಸಲಾಗಿದೆ. ಯುವತಿಯ ಗುರುತು ಸಹ ಪತ್ತೆಯಾಗಿಲ್ಲ. ಈ ಸಂಬಂಧ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply

Your email address will not be published. Required fields are marked *