ಮಂಡ್ಯ: ಜ್ವರದಿಂದ ಸಾಯುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಮಂಡ್ಯದಲ್ಲಿ ಹೆಚ್ಚಾಗುತ್ತಿದ್ದು ಇಂದು ಕೂಡ 18 ವರ್ಷದ ಯುವತಿ ಜ್ವರಕ್ಕೆ ಬಲಿಯಾಗಿದ್ದಾರೆ.
ಜಿಲ್ಲೆಯ ಮಳವಳ್ಳಿ ತಾಲೂಕಿನ ಸಾಹಳ್ಳಿ ಗ್ರಾಮದ ಮಧುಶ್ರೀ ಜ್ವರಕ್ಕೆ ಬಲಿಯಾದ ಯುವತಿ. ಮಳವಳ್ಳಿ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮಧುಶ್ರೀ, ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ರು.
Advertisement
ಹೀಗಾಗಿ ಚಿಕಿತ್ಸೆಗಾಗಿ ಆಕೆಯನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಮಧುಶ್ರೀ ಇದೀಗ ಮೃತಪಟ್ಟಿದ್ದಾರೆ. ಡೆಂಗ್ಯೂ ಜ್ವರದಿಂದ ಮಧುಶ್ರೀ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
Advertisement
ಜಿಲ್ಲೆಯಲ್ಲಿ ಇದುವರೆಗೂ ಜ್ವರದಿಂದ 10 ಕ್ಕೂ ಹೆಚ್ಚು ಜನ ಮೃತಪಟ್ಟಿದ್ದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.