ಲಕ್ನೋ: ಗದ್ದೆಯಲ್ಲಿ 18 ವರ್ಷದ ಯುವತಿಯ ಶವ ಪತ್ತೆಯಾಗಿದ್ದು, ಇದು ಅತ್ಯಾಚಾರ (Rape) ಮಾಡಿ ಕೊಲೆ (Murder) ಮಾಡಲಾಗಿದೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ಈ ಘಟನೆ ಉತ್ತರಪ್ರದೇಶ (Uttarpradesh) ದ ಔರೈಯಾ ಜಿಲ್ಲೆಯ ದಿಬಿಯಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ. ಬೆಳಗ್ಗೆ 7.30ರ ಸುಮಾರಿಗೆ ಯುವತಿ ವಿಶ್ರಾಂತಿ ತೆಗೆದುಕೊಳ್ಳಲೆಂದು ಒಬ್ಬಳೇ ಹೊರಗಡೆ ಹೋಗಿದ್ದಳು. ಹೀಗೆ ಹೋದವಳು ಕೆಲ ಹೊತ್ತಾದರೂ ವಾಪಸ್ ಬಂದಿಲ್ಲ. ಇದರಿಂದ ಮನೆ ಮಂದಿ ಗಾಬರಿಗೊಂಡರು. ಅಲ್ಲದೆ ಆಕೆಗಾಗಿ ಹುಡುಕಾಟ ನಡೆಸಲಾಯಿತು. ಈ ವೇಳೆ ಗದ್ದೆಯಲ್ಲಿ ಆಕೆ ಅನುಮಾನಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Advertisement
Advertisement
ಇತ್ತ ಯುವತಿ ಶವವಾಗಿ ಪತ್ತೆಯಾದ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ಹಾಗೂ ವಿಧಿವಿಜ್ಞಾನ ತಂಡದವರು ಸ್ಥಳಕ್ಕೆ ದೌಡಾಯಿಸಿದರು. ಐಜಿ ಹಾಗೂ ಶ್ವಾನ ದಳದ ಸಿಬ್ಬಂದಿ ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತಳ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಅದನ್ನು ವಿಡಿಯೋ ಚಿತ್ರೀಕರಿಸಲಾಗುವುದು ಎಂದು ಔರೈಯಾ ಎಸ್ಪಿ ಚಾರು ನಿಗಮ್ ತಿಳಿಸಿದ್ದಾರೆ. ಅಲ್ಲದೆ ಆರೋಪಿಗಳ ಪತ್ತೆಗೆ ಹತ್ತು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಅವರು ವಿವರಿಸಿದರು.
Advertisement
Advertisement
ಮೃತದೇಹವನ್ನು ಪೊಲೀಸರು ಬಲವಂತವಾಗಿ ತೆಗೆದುಕೊಂಡು ಹೋಗಿದ್ದಾರೆ ಎಂಬ ಸುದ್ದಿ ಹಾಗೂ ಸಂಬಂಧಪಟ್ಟ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದರಿಂದ ಸ್ಥಳೀಯರಲ್ಲಿ ಅಸಮಾಧಾನ ಉಂಟಾಗಿದೆ. ಆದರೆ ಔರೈಯಾ ಎಸ್ಪಿ ಚಾರು ನಿಗಮ್ ಈ ಆರೋಪವನ್ನು ನಿರಾಕರಿಸಿದ್ದು, ವಾಟ್ಸಪ್ ಮತ್ತು ಸೋಶಿಯಲ್ ಮೀಡಿಯಾಗಳಲ್ಲಿ ತಪ್ಪು ಮಾಹಿತಿ ಮತ್ತು ಸುಳ್ಳು ವದಂತಿಗಳನ್ನು ಹರಡದಂತೆ ಜನರಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮಗಳು ಅನ್ಯ ಜಾತಿ ಯುವಕನ ಜೊತೆ ಪರಾರಿ – ತಂದೆ, ತಾಯಿ, ತಮ್ಮ ಆತ್ಮಹತ್ಯೆ
In UP's Auraiya, a girl who had stepped out in the fields to relieve herself in the morning was later found dead. Family claims she was raped and murdered. A probe has begun. pic.twitter.com/TfJOrMcgfa
— Piyush Rai (@Benarasiyaa) October 3, 2022
ಮೃತ ದೇಹವನ್ನು ಬಲವಂತವಾಗಿ ತೆಗೆದುಕೊಂಡು ಹೋಗಲಾಗಿದೆ ಎಂದು ಕೆಲವರು ಸುದ್ದಿ ಹಬ್ಬಿಸುತ್ತಿದ್ದಾರೆ. ಇದು ತಪ್ಪು ದಾರಿಗೆಳೆಯುತ್ತಿದೆ. ಸಂತ್ರಸ್ತೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿತ್ತು. ಈ ಬಗ್ಗೆ ಕುಟುಂಬದವರಿಗೆ ತಿಳಿಸಲಾಗಿದ್ದು, ಶವವನ್ನು ಮೈದಾನದಿಂದ ಅಂಬುಲೆನ್ಸ್ನಲ್ಲಿ ಕೊಂಡೊಯ್ಯಲಾಯಿತು. ಈ ವೇಳೆ ಕೆಲವರು ವೀಡಿಯೋ ಮಾಡಿಕೊಂಡಿದ್ದು, ಇದೀಗ ವೈರಲ್ ಆಗಿದೆ ಎಂದು ಅವರು ವಿವರಿಸಿದರು.