ಬಸ್ಸಿನ ಬಾಗಿಲಲ್ಲಿ ನಿಲ್ಲಬೇಡ ಎಂದಿದ್ದಕ್ಕೆ ನಿರ್ವಾಹಕನ ಮೇಲೆ ಯುವಕನಿಂದ ಹಲ್ಲೆ

Public TV
1 Min Read
MND HALLE 2

ಬೆಳಗಾವಿ: ಬಸ್ಸಿನ ಬಾಗಿಲಲ್ಲಿ ನಿಲ್ಲಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಕೆಎಸ್‍ಆರ್‍ಟಿಸಿ ಬಸ್ ಕಂಡಕ್ಟರ್ ಮೇಲೆ ಯುವಕನೊಬ್ಬ ಹಲ್ಲೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಚಿಕ್ಕೋಡಿಯಿಂದ ಇಚಲಕರಂಜಿಗೆ ತೆರಳುತ್ತಿದ್ದ ಬಸ್‍ನಲ್ಲಿ ನಿರ್ವಾಹಕ ಹಾಗೂ ಯುವಕನ ನಡುವೆ ಗಲಾಟೆ ನಡೆದಿದೆ. ಬಸ್ಸಿನ ಬಾಗಿಲಲ್ಲಿ ನಿಲ್ಲಬೇಡ ಎಂದು ಹೇಳಿದರೂ ಕೇಳದೆ ಇದ್ದಿದ್ದಕ್ಕೆ ನಿರ್ವಾಹಕ ಮತ್ತು ಯುವಕನ ನಡುವೆ ವಾಗ್ವಾದ ನಡೆದಿದೆ.

CKD HALLE

ಈ ಸಂದರ್ಭದಲ್ಲಿ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಮೊಹಮ್ಮದ ಶೇಖ್ 18 ಎಂಬ ಯುವಕ ನಿರ್ವಾಹಕ ಪ್ರಕಾಶ ಮಾಯಣ್ಣ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆ ಹಿನ್ನೆಲೆಯಲ್ಲಿ ಬಸ್ ಅನ್ನು ಚಿಕ್ಕೋಡಿ ಪೊಲೀಸ್ ಠಾಣೆಗೆ ತಂದು ಯುವಕನ ವಿರುದ್ಧ ನಿರ್ವಾಹಕ ದೂರು ದಾಖಲಿಸಿದ್ದು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

CKD HALLE 3

Share This Article