ಲಕ್ನೋ: 18 ವರ್ಷದ ಯುವಕನೊಬ್ಬ ಸಂಬಂಧದಲ್ಲಿ ಅಜ್ಜಿಯಾಗಬೇಕಾದ 85 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಮುಜಪ್ಫರ್ ನಗರದಲ್ಲಿ ನಡೆದಿದೆ.
ಬುಧಾನಾ ಪ್ರದೇಶದ ಗ್ರಾಮವೊಂದರಲ್ಲಿ ಗುರುವಾರ ವೃದ್ಧೆ ಮನೆಯಲ್ಲಿ ಇದ್ದಾಗ ಆರೋಪಿ ಈ ರೀತಿ ಹೀನ ಕೃತ್ಯ ಎಸಗಿದ್ದಾನೆ. ಸದ್ಯಕ್ಕೆ ಪೊಲೀಸರು ಆರೋಪಿಯನ್ನು ಗುರುವಾರ ಸಂಜೆ ಬಂಧಿಸಿದ್ದು, ಕೃತ್ಯವೆಸಗಿದಾಗ ಆತ ಕುಡಿದ ಮತ್ತಿನಲ್ಲಿದ್ದ ಎಂದು ತಿಳಿದುಬಂದಿದೆ.
ಅರೋಪಿ ಯುವಕ ಅತ್ಯಾಚಾರ ಎಸಗಿದ ಬಳಿಕ ಮನೆಯಿಂದ ಪರಾರಿಯಾಗಿದ್ದಾನೆ. ನಾವು ಹೊರಗೆ ಹೋಗಿದ್ದೆವು. ಮನೆಗೆ ವಾಪಸ್ ಬಂದಾಗ ಅಜ್ಜಿ ನಡೆದ ಘಟನೆಯ ಬಗ್ಗೆ ವಿವರಿಸಿದರು. ನಂತರ ನಾನು ಪೊಲೀಸ್ ಠಾಣೆಗೆ ಬಂದು ದೂರು ಕೊಟ್ಟಿದ್ದೇವೆ ಎಂದು ಕುಟುಂಬದ ಸದಸ್ಯರು ಹೇಳಿದ್ದಾರೆ.
ವೃದ್ಧೆಯ ಕುಟುಂಬದವರು ದೂರು ನೀಡಿದ ಬಳಿಕ ನಾವು ಆರೋಪಿ ಯುವಕನ ಮೇಲೆ ಎಫ್‍ಐಆರ್ ದಾಖಲಿಸಿಕೊಂಡಿದ್ದು, ಆತನನ್ನು ಬಂಧಿಸಿದ್ದೇನೆ. ಸದ್ಯಕ್ಕೆ ವೃದ್ಧೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿಗಾಗಿ ಕಾಯುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಈ ಪ್ರಕರಣವನ್ನು ಐಪಿಸಿ ಸೆಕ್ಷನ್ 376ರ ಅಡಿಯಲ್ಲಿ ದಾಖಲಿಸಲಾಗಿದೆ. ಆರೋಪಿಯನ್ನು ವಿಚಾರಣೆ ಮಾಡುತ್ತಿದ್ದೇವೆ. ವೈದ್ಯಕೀಯ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv