ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಇಂದು ಕೊರೊನಾ ಪಾಸಿಟಿವ್ ಕೇಸ್ಗಳ ಸಂಖ್ಯೆ 1,800ರ ಗಡಿದಾಟಿದೆ. ಇಂದು ಒಟ್ಟು 1,837 ಪಾಸಿಟಿವ್ ಕೇಸ್ ಮತ್ತು 3 ಮರಣ ಪ್ರಕರಣ ದಾಖಲಾಗಿದೆ.
Advertisement
ಇಂದು ಪಾಸಿಟಿವಿಟಿ ರೇಟ್ ಶೇ. 6.32ಕ್ಕೆ ಏರಿಕೆ ಕಂಡಿದೆ. ಇದು ಆತಂಕಕ್ಕೆ ಕಾರಣವಾಗಿದೆ. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 10,922ಕ್ಕೆ ತಲುಪಿದೆ. ಬೆಂಗಳೂರು ನಗರದಲ್ಲೇ ಪ್ರಕರಣಗಳ ಸಂಖ್ಯೆ ಸಾವಿರ ಗಡಿದಾಟಿದೆ. ಇಂದು ಒಟ್ಟು 1,108 ಪ್ರಕರಣ ಪತ್ತೆಯಾಗಿದೆ. ಜಿಲ್ಲೆಗಳ ಪೈಕಿ ಮೈಸೂರಿನಲ್ಲಿ ಕೇಸ್ಗಳ ಸಂಖ್ಯೆ ನೂರರ ಗಡಿದಾಟಿದೆ. ಇಂದು ಬಳ್ಳಾರಿ, ಧಾರವಾಡ ಮತ್ತು ಕೊಪ್ಪಳದಲ್ಲಿ ಇಂದು ತಲಾ ಒಂದೊಂದು ಮರಣ ಪ್ರಕರಣ ಸೇರಿ ಈವರೆಗೆ ಒಟ್ಟು 40,147 ಮಂದಿ ಕೊರೊನಾಗೆ ಮೃತಪಟ್ಟಿದ್ದಾರೆ. ಇಂದು ರಾಜ್ಯದಲ್ಲಿ 1,017 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಚೊಚ್ಚಲ ಭಾಷಣದಲ್ಲಿ ಕುವೆಂಪು ಕವನ ಉಲ್ಲೇಖಿಸಿದ ರಾಷ್ಟ್ರಪತಿ ಮುರ್ಮು
Advertisement
Advertisement
ಈವರೆಗೆ ರಾಜ್ಯದಲ್ಲಿ ಒಟ್ಟು 40,31,283 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,80,172 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 7,929 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 29,027 ಸ್ಯಾಂಪಲ್ (ಆರ್ಟಿಪಿಸಿಆರ್ 23,513 + 5,514 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಅಯೋಧ್ಯೆಯಲ್ಲಿ ಕಸದ ಗಾಡಿಯಲ್ಲಿ ರಾಷ್ಟ್ರಧ್ವಜ ವಿತರಣೆ
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 12, ಬಳ್ಳಾರಿ 47, ಬೆಳಗಾವಿ 39, ಬೆಂಗಳೂರು ಗ್ರಾಮಾಂತರ 24, ಬೆಂಗಳೂರು ನಗರ 1,108, ಬೀದರ್ 2, ಚಾಮರಾಜನಗರ 24, ಚಿಕ್ಕಬಳ್ಳಾಪುರ 8, ಚಿಕ್ಕಮಗಳೂರು 16, ಚಿತ್ರದುರ್ಗ 2, ದಕ್ಷಿಣ ಕನ್ನಡ 20, ದಾವಣಗೆರೆ 17, ಧಾರವಾಡ 62, ಗದಗ 0, ಹಾಸನ 31, ಹಾವೇರಿ 25, ಕಲಬುರಗಿ 16, ಕೊಡಗು 17, ಕೋಲಾರ 16, ಕೊಪ್ಪಳ 10, ಮಂಡ್ಯ 10, ಮೈಸೂರು 141, ರಾಯಚೂರು 39, ರಾಮನಗರ 70, ಶಿವಮೊಗ್ಗ 23, ತುಮಕೂರು 24, ಉಡುಪಿ 8, ಉತ್ತರ ಕನ್ನಡ 21, ವಿಜಯಪುರ 2 ಮತ್ತು ಯಾದಗಿರಿಯಲ್ಲಿ 3 ಪಾಸಿಟಿವ್ ಪ್ರಕರಣ ದಾಖಲಾಗಿದೆ.
Live Tv
[brid partner=56869869 player=32851 video=960834 autoplay=true]