Bengaluru CityCoronaKarnatakaLatestLeading NewsMain Post

ರಾಜ್ಯದಲ್ಲಿ ಇಂದು 1,837 ಮಂದಿಗೆ ಕೊರೊನಾ ಸೋಂಕು – 4 ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತು ಸಾವು ಪ್ರಕರಣಗಳ ಏರಿಳಿತ ಮುಂದುವರಿದಿದೆ. ನಿನ್ನೆ (1,694)ಗೆ ಹೋಲಿಸಿದರೆ ಇಂದು ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. ಇಂದು 1,837 ಪಾಸಿಟಿವ್‌ ಕೇಸ್‌ ವರದಿಯಾಗಿದ್ದು, ಸೋಂಕಿಗೆ 4 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 11,898 ಇದೆ. ಬೆಂಗಳೂರು ನಗರದಲ್ಲಿ ಇಂದು ಕೂಡ ಪಾಸಿಟಿವ್ ಕೇಸ್‍ಗಳ ಸಂಖ್ಯೆ ಸಾವಿರ ಗಡಿದಾಟಿದೆ. ಇಂದು ಒಟ್ಟು 1,137 ಪ್ರಕರಣ ಪತ್ತೆಯಾಗಿದ್ದು, ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 8,283ಕ್ಕೆ ತಲುಪಿದೆ. ನಗರದ ಜೊತೆಗೆ ಜಿಲ್ಲೆಗಳಲ್ಲೂ ಪಾಸಿಟಿವ್ ಪ್ರಕರಣಗಳ ಏರಿಳಿತ ಮುಂದುವರಿದಿದೆ. ಈವರೆಗೆ ಒಟ್ಟು 40,118 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಇಂದು ರಾಜ್ಯದಲ್ಲಿ 1,290 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಪಾಸಿಟಿವಿಟಿ ರೇಟ್ ಶೇ. 6.24ಕ್ಕೆ ತಲುಪಿದೆ. ಇದನ್ನೂ ಓದಿ: 75ನೇ ಸ್ವಾತಂತ್ರ್ಯ ಸಂಭ್ರಮಕ್ಕೆ 75 ಮೀ. ತಿರಂಗಾದೊಂದಿಗೆ 75 ಕಿ.ಮೀ ರ‍್ಯಾಲಿ

ಈವರೆಗೆ ರಾಜ್ಯದಲ್ಲಿ ಒಟ್ಟು 40,20,087 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,68,029 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 4,956 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 29,425 ಸ್ಯಾಂಪಲ್ (ಆರ್‌ಟಿ-ಪಿಸಿಆರ್ 21,801 + 7,624 ರ್‍ಯಾಪಿಡ್ ಆ್ಯಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 28, ಬಳ್ಳಾರಿ 55, ಬೆಳಗಾವಿ 57, ಬೆಂಗಳೂರು ಗ್ರಾಮಾಂತರ 36, ಬೆಂಗಳೂರು ನಗರ 1,137, ಬೀದರ್ 5, ಚಾಮರಾಜನಗರ 19, ಚಿಕ್ಕಬಳ್ಳಾಪುರ 7, ಚಿಕ್ಕಮಗಳೂರು 15, ಚಿತ್ರದುರ್ಗ 4, ದಕ್ಷಿಣ ಕನ್ನಡ 15, ದಾವಣಗೆರೆ 25, ಧಾರವಾಡ 113, ಗದಗ 1, ಹಾಸನ 15, ಹಾವೇರಿ 17, ಕಲಬುರಗಿ 26, ಕೊಡಗು 32, ಕೋಲಾರ 26, ಕೊಪ್ಪಳ 24, ಮಂಡ್ಯ 4, ಮೈಸೂರು 83, ರಾಯಚೂರು 18, ರಾಮನಗರ 2, ಶಿವಮೊಗ್ಗ 20, ತುಮಕೂರು 26, ಉಡುಪಿ 5, ಉತ್ತರ ಕನ್ನಡ 16, ವಿಜಯಪುರ 6 ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ತಗ್ಗಿದ ಮಳೆ – ರೆಡ್‌ನಿಂದ ಆರೆಂಜ್ ಅಲರ್ಟ್‌ನತ್ತ ಕರಾವಳಿ

Live Tv

Leave a Reply

Your email address will not be published.

Back to top button