Corona

1,875 ಪಾಸಿಟಿವ್ ಕೇಸ್ – ಬೆಂಗಳೂರಿಗಿಂತ ದಕ್ಷಿಣ ಕನ್ನಡದಲ್ಲೇ ಜಾಸ್ತಿ

Published

on

Share this

ಬೆಂಗಳೂರು: ರಾಜ್ಯದಲ್ಲಿ ಇಂದು 1875 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ. 25 ಮಂದಿ ಸಾವನ್ನಪ್ಪಿದ್ದು, 1502 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲಾವಾರು ವರದಿಯಲ್ಲಿ ದಕ್ಷಿಣ ಕನ್ನಡ 410 ಕೇಸ್‍ಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.1.20ರಷ್ಟಿದೆ.

ರಾಜ್ಯದಲ್ಲಿ ಒಟ್ಟು 24,144 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,06,999 ಮಂದಿಗೆ ಕೊರೊನಾ ಬಂದಿದೆ. 28,46,244 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.2.33ರಷ್ಟಿದೆ.

ಇಂದು ರಾಜ್ಯದಲ್ಲಿ ಒಟ್ಟು 1,55,048 ಸ್ಯಾಂಪಲ್ (ಆರ್‍ಟಿ ಪಿಸಿಆರ್ 1,24,295 + 30,753 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರಿನಲ್ಲಿ ಇಂದು 409 ಮಂದಿಗೆ ಕೊರೊನಾ ಸೋಂಕು ತಗುಲಿದೆ. 377 ಜನ ಇಂದು ಡಿಸ್ಚಾರ್ಜ್ ಆಗಿದ್ದಾರೆ. 8 ಮಂದಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಶಾಲೆ ರೀ ಓಪನ್‍ಗೆ ತಜ್ಞರ ಗ್ರೀನ್ ಸಿಗ್ನಲ್ – ಷರತ್ತು ಅನ್ವಯ

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆಯಲ್ಲಿ ಶೂನ್ಯ ಪ್ರಕರಣ, ಬಳ್ಳಾರಿ 13, ಬೆಳಗಾವಿ 39, ಬೆಂಗಳೂರು ಗ್ರಾಮಾಂತರ 37, ಬೆಂಗಳೂರು ನಗರ 409, ಬೀದರ್ 1, ಚಾಮರಾಜನಗರ 33, ಚಿಕ್ಕಬಳ್ಳಾಪುರ 23, ಚಿಕ್ಕಮಗಳೂರು 65, ಚಿತ್ರದುರ್ಗ 32, ದಕ್ಷಿಣ ಕನ್ನಡ 410, ದಾವಣಗೆರೆ 17, ಧಾರವಾಡ 23, ಗದಗ 12, ಹಾಸನ 108, ಹಾವೇರಿ 2, ಕಲಬುರಗಿ 9, ಕೊಡಗು 83, ಕೋಲಾರ 35, ಕೊಪ್ಪಳ 1, ಮಂಡ್ಯ 42, ಮೈಸೂರು 146, ರಾಯಚೂರು 1, ರಾಮನಗರ 7, ಶಿವಮೊಗ್ಗ 65, ತುಮಕೂರು 52, ಉಡುಪಿ 162, ಉತ್ತರ ಕನ್ನಡ 46, ವಿಜಯಪುರ ಮತ್ತು ಯಾದಗಿರಿಯಲ್ಲಿ 1 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

Click to comment

Leave a Reply

Your email address will not be published. Required fields are marked *

Advertisement
Advertisement