ಭೋಪಾಲ್: ಜಾರ್ಖಾಂಡ್ ತಂಡದ ನಾಯಕ ಇಶಾನ್ ಕಿಶನ್ ಇಂದೋರ್ ನಲ್ಲಿ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ 19 ಬೌಂಡರಿ 11 ಸಿಕ್ಸರ್ ಬಾರಿಸಿ ಮತ್ತೊಮ್ಮೆ ತಮ್ಮ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ.
Advertisement
ಮಧ್ಯಪ್ರದೇಶದ ಇಂದೋರ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಗ್ರೂಪ್ ಬಿ ತಂಡಗಳಾದ ಜಾರ್ಖಂಡ್ ಮತ್ತು ಮಧ್ಯಪ್ರದೇಶ ನಡುವಿನ ವಿಜಯ್ ಹಜಾರೆ ಟ್ರೋಫಿಯಲ್ಲಿ ಟಾಸ್ ಗೆದ್ದ ಮಧ್ಯಪ್ರದೇಶ ತಂಡದ ನಾಯಕ ಅಭಿಷೇಕ್ ಭಂಡಾರಿ ಎದುರಾಳಿ ತಂಡವನ್ನು ಬ್ಯಾಟಿಂಗ್‍ಗೆ ಆಹ್ವಾನಿಸಿದರು. ಇದರ ಪೂರ್ಣ ಲಾಭವೆತ್ತಿದ ಜಾರ್ಖಾಂಡ್ ತಂಡದ ನಾಯಕ ಇಶಾನ್ ಕಿಶನ್ 173 ರನ್ (94 ಎಸೆತ, 19 ಬೌಂಡರಿ, 11 ಸಿಕ್ಸರ್) ಸಿಡಿಸಿ ಬ್ಯಾಟಿಂಗ್ ಪರಾಕ್ರಮ ಮೆರೆದರು.
Advertisement
ಮೊದಲು 50 ರನ್‍ಗಳಿಸಲು 42 ಬಾಲ್‍ಗಳನ್ನು ಎದುರಿಸಿದ ಇಶಾನ್ ಕಿಶನ್ ನಂತರ ಲಯಕ್ಕೆ ಬಂದು ತಮ್ಮ ಬ್ಯಾಟಿಂಗ್ ಗೇರ್ ಬದಲಾಯಿಸಿಕೊಂಡು 74 ಬಾಲ್‍ಗಳಲ್ಲಿ ಶತಕ ಸಿಡಿಸಿ ಮಿಂಚಿದರು. ಶತಕದ ಬಳಿಕ ಮತ್ತಷ್ಟು ಬಿರುಸಿನ ಬ್ಯಾಟಿಂಗ್ ನಡೆಸಿದ ಕಿಶನ್ 173 ರನ್‍ಗಳಿಸಿ ಗೌರವ್ ಯಾದವ್‍ಗೆ ವಿಕೆಟ್ ಒಪ್ಪಿಸಿದರು.
Advertisement
Advertisement
ಇಶಾನ್ ಕಿಶನ್ ಬ್ಯಾಟಿಂಗ್ ಪರಾಕ್ರಮದ ಮುಂದೆ ಮಂಡಿಯೂರಿದ ಎದುರಾಳಿ ಮಧ್ಯಪ್ರದೇಶ ತಂಡ ಜಾರ್ಖಂಡ್ ನೀಡಿದ 422 ರನ್‍ಗಳ ಟಾರ್ಗೆಟ್ ಚೇಸ್ ಮಾಡಲಾಗದೆ ಕೇವಲ 98 ರನ್‍ಗಳಿಗೆ ಸರ್ವಪತನ ಕಂಡಿತು. ಈ ಮೂಲಕ ಜಾರ್ಖಂಡ್ ತಂಡ 324ರನ್ ಗಳ ಭರ್ಜರಿ ಜಯ ಗಳಿಸಿದೆ.