ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ (Mansore) ಅವರ ’19.20.21’ ಸಿನಿಮಾ ಇಂಡೋಜರ್ಮನ್ ಫಿಲ್ಮ್ ವೀಕ್ 12ನೇ ಆವೃತ್ತಿಯ ಚಲನಚಿತ್ರೋತ್ಸವಕ್ಕೆ (Chirotsava) ಆಗಿಯಾಗಿದೆ. ಇದೇ ತಿಂಗಳ ಮೇ 29 ರಿಂದ ಜೂನ್ 07ನೇ ತಾರೀಖಿನವರೆಗೆ ಜರ್ಮನಿಯ (German) ಬರ್ಲಿನ್‌ನಲ್ಲಿರುವ ಐತಿಹಾಸಿಕ ಬ್ಯಾಬಿಲೋನ್ ಥಿಯೇಟರ್‌ನಲ್ಲಿ ಈ ಚಿತ್ರೋತ್ಸವ ನಡೆಯಲಿದೆ. ಈ ಚಿತ್ರೋತ್ಸವದಲ್ಲಿ ‘19.20.21’ ಸಿನೆಮಾ ಪ್ರದರ್ಶನವಾಗಲಿದೆ.
ಇದು ನೈಜ ಘಟನೆ ಆಧರಿಸಿದ ಸಿನಿಮಾವಾಗಿದ್ದು, ಕರಾವಳಿಯಲ್ಲಿ ಎರಡು ದಶಕಗಳ ಕಾಲ ಒಂದು ಸಮುದಾಯ ಅನುಭವಿಸಿದ ನೋವು, ಆ ನೋವಿನ ವಿರುದ್ಧ ನಡೆಸಿದ ಹೋರಾಟ ಈ ಸಿನಿಮಾ ಮಾಡಲು ಸ್ಪೂರ್ತಿಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಕಳೆದ ಒಂಭತ್ತು ವರ್ಷದಿಂದ ಅಧ್ಯಯನ ಮಾಡಿ ಮಾಹಿತಿ ಕಲೆ ಸಿನಿಮಾ ಮಾಡಿದ್ದಾರೆ ನಿರ್ದೇಶಕರು. 2021ರಲ್ಲಿ ಘಟನೆಗೆ ಸಂಬಂಧಿಸಿದ ತೀರ್ಪು ಬಂದ ಮೇಲೆ ಸಿನಿಮಾ ಮಾಡಲು ನಿರ್ಧರಿಸಿದ್ದ ಟೀಮ್, ಈ ಘಟನೆಗೆ ಸಂಬಂಧಿಸಿದ ಮಾಹಿತಿ ಕಲೆ ಹಾಕಿ ಸ್ಕ್ರಿಪ್ಟ್ ಮಾಡಿದ್ದಾರೆ. ಸಮುದಾಯದ ಒಬ್ಬ ಹುಡುಗನ ಹೋರಾಟದ ಕಥೆ ಈ ಸಿನಿಮಾದ ಜೀವಾಳ. ಇದನ್ನೂ ಓದಿ:ರಸ್ತೆ ಅಪಘಾತ : ಕಿರುತೆರೆ ಖ್ಯಾತ ನಟಿ ವೈಭವಿ ಉಪಾಧ್ಯಾಯ ದುರ್ಮರಣ
ರಂಗಭೂಮಿ ಕಲಾವಿದರರಾದ ಶೃಂಗ ಬಿ ವಿ (Shringa) ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಬಾಲಾಜಿ ಮನೋಹರ್, ಸಂಪತ್, ಎಂ.ಡಿ ಪಲ್ಲವಿ (MD Pallavi), ಮಹದೇವ್ ಹಡಪತ್, ಉಗ್ರಂ ಸಂದೀಪ್ ಒಳಗೊಂಡ ಪ್ರತಿಭಾನ್ವಿತರ ತಾರಾಗಣ ಚಿತ್ರದಲ್ಲಿದೆ. ಯಲ್ಲಾಪುರ, ಧಾರವಾಡ, ಮಂಗಳೂರು, ಕುಂದಾಪುರ ಸೇರಿದಂತೆ ಹಲವು ಕಡೆ ಚಿತ್ರವನ್ನು ಸೆರೆ ಹಿಡಿಯಲಾಗಿದೆ.
ಶಿವು ಬಿ ಕೆ ಕುಮಾರ್ ಛಾಯಾಗ್ರಹಣ, ರೋಣದ ಬಕ್ಕೇಶ್ ಹಿನ್ನೆಲೆ ಸಂಗೀತ, ಬಿಂದು ಮಾಲಿನಿ ಸಂಗೀತ ನಿರ್ದೇಶನ, ಸುರೇಶ್ ಆರ್ಮುಗಂ ಸಂಕಲನ, ವೀರೇಂದ್ರ ಮಲ್ಲಣ್ಣ (Virendra Mallanna) ಮತ್ತು ಅವಿನಾಶ್ ಜಿ ಸಂಭಾಷಣೆ, ಮಂಸೋರೆ ಮತ್ತು ವೀರೇಂದ್ರ ಮಲ್ಲಣ್ಣ ಚಿತ್ರಕತೆ, ಕಿರಣ್ ಕಾವೇರಪ್ಪ ಸಾಹಿತ್ಯ ಚಿತ್ರಕ್ಕಿದೆ. ದೇವರಾಜ್ ಆರ್ (Devaraj.R) 19.20.21 ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.