ಹೈದರಾಬಾದ್: ತೆಲಂಗಾಣದ (Telangana) ವಾರಂಗಲ್ ಜಿಲ್ಲೆಯ ಸಾರ್ವಜನಿಕ ವಲಯದ ಬ್ಯಾಂಕ್‌ನಿಂದ 13.6 ಕೋಟಿ ರೂ. ಮೌಲ್ಯದ 19 ಕೆಜಿ ಚಿನ್ನವನ್ನು ಖದೀಮರು ದರೋಡೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬ್ಯಾಂಕ್ (Bank) ಸಿಬ್ಬಂದಿ ಕಳ್ಳತನವಾಗಿರುವ ಬಗ್ಗೆ ದೂರು ನೀಡಿದ ಬೆನ್ನಲ್ಲೇ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ. ಪೊಲೀಸರ ಪ್ರಕಾರ, ಕಳ್ಳರು ಗ್ಯಾಸ್ ಕಟ್ಟರ್‌ಗಳನ್ನು ಬಳಸಿ ಬ್ಯಾಂಕ್ ಕಿಟಕಿಯನ್ನು ಒಡೆದು ಒಳಗೆ ಪ್ರವೇಶಿಸಿದ್ದಾರೆ. ಸಿಸಿಟಿವಿ ಕ್ಯಾಮೆರಾಗಳನ್ನು ಕೂಡ ಹಾನಿಗೊಳಿಸಿದ್ದಾರೆ. ಯಾವುದೇ ಸಾಕ್ಷ್ಯ ಸಿಗಬಾರದೆಂದು ಡಿಜಿಟಲ್ ವೀಡಿಯೊ ರೆಕಾರ್ಡರ್ ಕೂಡ ಹೊತ್ತೊಯ್ದಿದ್ದಾರೆ. ಇದನ್ನೂ ಓದಿ: ಭ್ರಷ್ಟಾಚಾರ ಆರೋಪ – 4 ಅಧಿಕಾರಿಗಳಿಗೆ ಸೇರಿದ 25 ಸ್ಥಳಗಳಿಗೆ ‘ಲೋಕಾ’ ದಾಳಿ
ಘಟನೆಯ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವ್ಯಾಪಕ ತನಿಖೆ ಕೈಗೊಂಡಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕೌಟುಂಬಿಕ ಕಲಹ- ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ