ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ (Cylinder Price) ದರವನ್ನು 30 ರೂ. ಇಳಿಕೆ ಮಾಡಿದೆ.
ದರ ಇಳಿಕೆಯಿಂದ ದೆಹಲಿಯಲ್ಲಿ ಮೊದಲು 1,676 ರೂ.ಗೆ ಮಾರಾಟವಾಗುತ್ತಿದ್ದ 19 ಕೆಜಿ ಸಿಲಿಂಡರ್ ಈಗ 1,646 ರೂ.ಗೆ ಮಾರಾಟವಾಗುತ್ತಿದೆ. ಮುಂಬೈನಲ್ಲಿ 19 ಕೆಜಿ ಸಿಲಿಂಡರ್ ಬೆಲೆ 1,598 ರೂ., ಕೋಲ್ಕತ್ತಾದಲ್ಲಿ 1,756 ರೂ. ಇದೆ. ಇದನ್ನೂ ಓದಿ: ಭಾರತೀಯ ನ್ಯಾಯ ಸಂಹಿತೆಯಡಿ ದೆಹಲಿಯಲ್ಲಿ ಮೊದಲ FIR ದಾಖಲು
ಗೃಹ ಬಳಕೆಯಲ್ಲಿ ಬಳಸುವ ಬಳಸುವ 14.2 ಕೆಜಿ ಎಲ್‌ಪಿಜಿ (LPG) ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಂಗಳೂರಿನಲ್ಲಿ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 905.50 ರೂ.ದರವಿದೆ.
ದೆಹಲಿಯಲ್ಲಿ 803 ರೂ. ಕೋಲ್ಕತ್ತಾದಲ್ಲಿ 829 ರೂ. ಚೆನ್ನೈನಲ್ಲಿ 818.50 ರೂ. ಮತ್ತು ಮುಂಬೈನಲ್ಲಿ 802.50 ರೂ. ಇದೆ. ಇದನ್ನೂ ಓದಿ: ಬಳ್ಳಾರಿ ಗ್ರಾಹಕರ ಜೇಬಿಗೆ ಕತ್ತರಿ – KMFನಿಂದ ಒಂದು ದರ, ಮಾರಾಟಕ್ಕೆ ಮತ್ತೊಂದು ದರ