ಬೀದರ್: ಆನೆಕಾಲು ರೋಗದ ತಡೆ ಮಾತ್ರೆ ಸೇವಿಸಿ 19 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ದಾಬಕಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ನಡೆದಿದೆ.
ಗ್ರಾಮದ ಆರೋಗ್ಯ ಸಿಬ್ಬಂದಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಆನೆಕಾಲು ಮಾತ್ರೆ ವಿತರಿಸಿದ್ದರು. ಇದನ್ನೂ ಓದಿ: ಕೋರ್ಟ್ ತೀರ್ಪು ಬರೋವರೆಗೂ ಪರೀಕ್ಷೆ ಮುಂದೂಡಿ – ಹಿಜಬ್ ಹೋರಾಟಗಾರ್ತಿಯರು
- Advertisement
ಮಕ್ಕಳು ಮಾತ್ರೆ ಸೇವಿಸಿದ ಬಳಿಕ ಹೊಟ್ಟೆ ನೋವು, ತಲೆ ಸುತ್ತು ಕಾಣಿಸಿಕೊಂಡಿದೆ. ತಕ್ಷಣವೇ ಅಸ್ವಸ್ಥಗೊಂಡ ಮಕ್ಕಳನ್ನು ಶಾಲೆಯ ಶಿಕ್ಷಕರು ಆಸ್ಪತ್ರೆಗೆ ದಾಖಲಿಸಿದ್ದು, ದಾಬಕಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.