ಬೀದರ್: ಜಿಎನ್‌ಡಿ ಎಂಜಿನಿಯರಿಂಗ್ ಕಾಲೇಜಿನಲ್ಲಿ (GND Engineering College Bidar) ನಡೆದ ಗುಂಪು ಸಂಘರ್ಷದಲ್ಲಿ ಭಾಗಿಯಾಗಿದ್ದ 19 ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ.
ಆಂತರಿಕ ವಿಚಾರಣೆ ಮುಗಿಯುವವರೆಗೆ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದ್ದು ಈಗಾಗಲೇ ಕಾಲೇಜಿನಲ್ಲಿ ಐದು ಜನರ ಉಪನ್ಯಾಸಕರ ವಿಚಾರಣೆ ಸಮಿತಿಯನ್ನು ರಚನೆ ಮಾಡಲಾಗಿದೆ. ಇದನ್ನೂ ಓದಿ: ಭವಾನಿ ರೇವಣ್ಣಗೆ ಕೊನೆಗೂ ಮಧ್ಯಂತರ ಜಾಮೀನು ಮಂಜೂರು
ಈ ಪ್ರಕರಣದಿಂದ ಕಾಲೇಜು ಆಡಳಿತ ಮಂಡಳಿಗೆ ಬಾರಿ ಮುಜುಗರವಾಗಿತ್ತು. ಈಗ ಕಾಲೇಜಿನ ನಿಯಮದ ಅಡಿಯಲ್ಲಿ ಪ್ರಕರಣದಲ್ಲಿ ಭಾಗಿಯಾದ ವಿದ್ಯಾರ್ಥಿಗಳ ಆಂತರಿಕ ವಿಚಾರಣೆ ಮಾಡುವ ಉದ್ದೇಶದಿಂದ ಅಮಾನತು ಮಾಡಲಾಗಿದೆ. ಕಾಲೇಜಿನ ಈ ವಿಚಾರಣೆ ಪೊಲೀಸರ ಮುಂದಿನ ವಿಚಾರಣೆಗೆ ಸಹಾಯವಾಗಲಿದೆ. ಇದನ್ನೂ ಓದಿ: ರಾಹುಲ್ ಗಾಂಧಿಗೆ ಜಾಮೀನು ಮಂಜೂರು – ಡಿಕೆಸು ಪ್ರಾಪರ್ಟಿ ಶ್ಯೂರಿಟಿ
ಮೇ 29 ರಂದು ಕಾಲೇಜಿನಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ಜೈಶ್ರೀರಾಮ್ ಹಾಡು ಹಾಕಿದ್ದಕ್ಕೆ ಮುಸ್ಲಿಂ ಯುವಕರು ಹಿಂದೂ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ್ದು ರಾಜ್ಯಾದ್ಯಂತ ಬಾರಿ ಸುದ್ದಿಯಾಗಿತ್ತು. ಈಗಾಗಲೇ ಗಾಂಧಿಗಂಜ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದುವರಿಸಿದ್ದಾರೆ.