ಬೆಂಗಳೂರು: ಒಂದೇ ದಿನಕ್ಕೆ 19 ಮಂದಿ ಸಂಚಾರಿ ಪೊಲೀಸರನ್ನು ಅಮಾನತುಗೊಳಿಸಿ ಡಿಸಿಪಿ ಆದೇಶ ಹೊರಡಿಸಿದ್ದಾರೆ. 2 ಸಂಚಾರಿ ಠಾಣೆಯ ಪೊಲೀಸರು ಅಮಾನತುಗೊಂಡಿದ್ದಾರೆ.
ಮಾಗಡಿ ರಸ್ತೆ ಸಂಚಾರಿ ಪೊಲೀಸ್ ಠಾಣೆಯ 5 ಹಾಗೂ ಕಾಮಾಕ್ಷಿ ಪಾಳ್ಯ ಸಂಚಾರಿ ಪೊಲೀಸ್ ಠಾಣೆಯ 14 ಸಿಬ್ಬಂದಿ ಸಸ್ಪೆಂಡ್ ಆಗಿದ್ದಾರೆ. ಓರ್ವ ಪಿಸಿ, ಹೆಚ್.ಸಿ ಎಎಸ್‌ಐ ಸೇರಿ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಐವರು ಅಮಾನತಾಗಿದ್ದಾರೆ. ಇದನ್ನೂ ಓದಿ: ರಾಯಚೂರಿನಲ್ಲಿ ಎರಡು ಪ್ರತ್ಯೇಕ ಅಪಘಾತ – ಇಬ್ಬರು ಸಾವು
ಮಾಗಡಿ ರಸ್ತೆ ಸಂಚಾರ ಪೊಲೀಸರ ಮೇಲೆ ಅಶಿಸ್ತು ಹಾಗೂ ಹಿರಿಯ ಅಧಿಕಾರಿಗಳ ಆದೇಶ ಪಾಲಿಸದ ಆರೋಪದಡಿ ಅಮಾನತು ಮಾಡಲಾಗಿದೆ. ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಯಲ್ಲಿ 14 ಜನ ಸಸ್ಪೆಂಡ್ ಆಗಿದ್ದಾರೆ. ಅಶಿಸ್ತು ಹಿನ್ನೆಲೆ ಸಸ್ಪಂಡ್ ಮಾಡಿ ಸಂಚಾರ ಪಶ್ಚಿಮ ವಿಭಾಗ ಡಿಸಿಪಿ ಆದೇಶ ಹೊರಡಿಸಿದ್ದಾರೆ.
ಕಾಮಾಕ್ಷಿ ಪಾಳ್ಯ ಸಿಬ್ಬಂದಿ ಕುಡಿದು ಡ್ಯಾನ್ಸ್ ಮಾಡಿದ್ದರು. ಇದು ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದಿತ್ತು. ಈ ಹಿನ್ನೆಲೆ ಇಲಾಖೆಯಲ್ಲಿ ಅಶಿಸ್ತು ತೋರಿದ್ದಕ್ಕೆ ಅಮಾನತುಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಇಲಾಖೆ ಆದೇಶಿಸಿದೆ. ಇದನ್ನೂ ಓದಿ: ಚೈತ್ರಾ ಕುಂದಾಪುರ ಸೇರಿ 7 ಆರೋಪಿಗಳಿಗೆ ನ್ಯಾಯಾಂಗ ಬಂಧನ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]