19 ವರ್ಷದ ಯುವತಿ ಅನುಮಾನಸ್ಪದ ಸಾವು- ಅತ್ಯಾಚಾರ, ಕೊಲೆ ಶಂಕೆ

Public TV
1 Min Read
POLICE JEEP

ಬೆಳಗಾವಿ: ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ 19 ವರ್ಷದ ಯುವತಿ ಅನುಮಾನಾಸ್ಪದ ಸಾವನ್ನಪ್ಪಿದ್ದು ಅತ್ಯಾಚಾರ ಮಾಡಿ ಬಳಿಕ ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರ ಆರೋಪಿಸಿದ್ದಾರೆ. ಈ ಕುರಿತು ಎಪಿಎಂಸಿ (APMC) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BELAGAVI

ಬೆಳಗಾವಿ ಜಿಲ್ಲೆ ಬೈಲಹೊಂಗಲ ಪಟ್ಟಣದ ನಿವಾಸಿಯಾಗಿರುವ ತಬಸ್ಸುಮ್ ಸವದತ್ತಿ (19) ಸಾವನ್ನಪ್ಪಿದ ಯುವತಿ. ಮೃತ ಯುವತಿ ಬೆಂಗಳೂರಿನಲ್ಲಿ ಕಾಲ್ ಸೆಂಟರ್ (Call Centre) ನಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಒಂದು ತಿಂಗಳ ಹಿಂದೆ ಬೆಂಗಳೂರಿಗೆ ತೆರಳಿದ್ದ ಯುವತಿ ಕಾಲ್ ಸೆಂಟರ್ ಗೆ ಕೆಲಸಕ್ಕೆ ತಬಸ್ಸುಮ್ ಸೇರಿದ್ದರು. ಆದರೆ ಏಕಾಏಕಿ ನಿನ್ನೆ ತಬಸ್ಸುಮ್‍ಳನ್ನು ಅಪರಿಚಿತ ವ್ಯಕ್ತಿಯೊಬ್ಬರು ಬೆಳಗಾವಿ ಜಿಲ್ಲಾಸ್ಪತ್ರೆ (Belagavi District Hospital) ಗೆ ದಾಖಲಿಸಿದ್ದರು.

IPHONE 2

ಈ ವೇಳೆ ಎಂಎಲ್‍ಸಿ (MLC) ಮಾಡ್ತೀವಿ ಅನ್ನುತ್ತಿದ್ದಂತೆ ಯುವತಿಯ ಮೊಬೈಲ್‍ (Mobile) ನೊಂದಿಗೆ ಅಪರಿಚಿತ ಯುವಕ ಎಸ್ಕೇಪ್ ಆಗಿದ್ದಾನೆ. ಬಳಿಕ ಕುಟುಂಬಸ್ಥರು ಆಸ್ಪತ್ರೆಗೆ ಆಗಮಿಸಿದ ವೇಳೆ ಯುವತಿ ನಿತ್ರಾಣ ಸ್ಥಿತಿಯಲ್ಲಿದ್ದರು. ಹೀಗಾಗಿ ತಬಸ್ಸುಮ್ ಳನ್ನು ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಇದನ್ನೂ ಓದಿ: ಬಲವಂತವಾಗಿ ಮಂಗಳಮುಖಿಯ ಮುಂದೆಲೆ ಕತ್ತರಿಸಿ ಹಲ್ಲೆ – ಇಬ್ಬರು ಅರೆಸ್ಟ್

Hospital Bed 1

ಇಂದು ಬೆಳಗ್ಗೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನೂ ತಬಸ್ಸುಮ್ ತಲೆಯ ಹಿಂಬದಿಗೆ ಗಾಯದ ಗುರುತು ಪತ್ತೆಯಾಗಿದೆ. ಅಷ್ಟೇ ಅಲ್ಲದೇ ಮೈಯಲ್ಲಿ ಸಿಗರೇಟ್‍ನಿಂದ ಸುಟ್ಟಿರುವ ಗಾಯದ ಗುರುತುಗಳಿದ್ದು, ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆಂದು ಕುಟುಂಬಸ್ಥರ ಆರೋಪಿಸಿದ್ದಾರೆ. ಇದಲ್ಲದೇ ಸಿಬಿಐ (CBI) ತನಿಖೆ ಮಾಡಬೇಕು. ತಪ್ಪಿಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು. ಈ ಕುರಿತು ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Live Tv
[brid partner=56869869 player=32851 video=960834 autoplay=true]

Share This Article