CrimeLatestMain PostNational

ಚಲಿಸುತ್ತಿದ್ದ ಕಾರಿನಲ್ಲಿ ಮಾಡೆಲ್ ಮೇಲೆ ಗ್ಯಾಂಗ್ ರೇಪ್

ತಿರವನಂತಪುರಂ: ಚಲಿಸುತ್ತಿದ್ದ ಕಾರಿನಲ್ಲಿ 19 ವರ್ಷದ ಮಾಡೆಲ್ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಕೇರಳದ (Kerala) ಕೊಚ್ಚಿಯಲ್ಲಿ (Kochi) ನಡೆದಿದೆ.

ಗುರುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಎರ್ನಾಕುಲಂ (Ernakulam) ಪೊಲೀಸರು ಮೂವರು ವ್ಯಕ್ತಿ ಮತ್ತು ಓರ್ವ ಮಹಿಳೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೊಚ್ಚಿನ್ ಶಿಪ್‍ಯಾರ್ಡ್ (Cochin Shipyard) ಬಳಿಯ ಪಬ್‍ಗೆ ಭೇಟಿ ನೀಡಿದ್ದ ಮಾಡೆಲ್, ರಾತ್ರಿ ಕುಡಿದಿದ್ದರು. ಈ ವೇಳೆ ಆರೋಪಿಗಳು ಕಾಕ್ಕನಾಡ್‍ನಲ್ಲಿರುವ (Kakkanad) ಆಕೆಯ ಮನೆಗೆ ಡ್ರಾಪ್ ಮಾಡುವ ನೆಪದಲ್ಲಿ ಕಾರಿಗೆ ಹತ್ತಿಸಿಕೊಂಡಿದ್ದಾರೆ. ನಂತರ ದಾರಿ ಮಧ್ಯೆ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ತಡರಾತ್ರಿ ನಗರವೆಲ್ಲಾ ಸುತ್ತಾಡುತ್ತಾ ಚಲಿಸುತ್ತಿದ್ದ ಕಾರಿನಲ್ಲಿಯೇ ಮಾಡೆಲ್ (Model) ಮೇಲೆ ಅತ್ಯಾಚಾರವೆಸಗಿ, ನಂತರ ಹಲ್ಲೆ ನಡೆಸಿ ಕೊನೆಗೆ ಆಕೆಯನ್ನು ಮನೆಯ ಬಳಿ ಬಿಟ್ಟು ಹೋಗಿದ್ದಾರೆ.

ಇದೀಗ ಯುವತಿ ಕಲಮಶ್ಶೇರಿ ವೈದ್ಯಕೀಯ ಕಾಲೇಜಿನಲ್ಲಿ (Kalamassery Medical College) ಚಿಕಿತ್ಸೆ ಪಡೆಯುತ್ತಿದ್ದಾರೆ. ಯುವತಿ ಮೇಲೆ ಅತ್ಯಾಚಾರಬೆಸಗಿರುವುದು ವೈದ್ಯಕೀಯ ವರದಿಯಲ್ಲಿ ದೃಢವಾಗಿದ್ದು, ದುಷ್ಕರ್ಮಿಗಳು ಮಾಡೆಲ್ ಅನ್ನು ಕಾಕ್ಕನಾಡ್‍ನಲ್ಲಿ ಡ್ರಾಪ್ ಮಾಡಿ ಪಾರಾರಿಯಾಗಿದ್ದಾರೆ. ಇಂದು ಬೆಳಗ್ಗೆ ಮಹಿಳೆಯನ್ನು ಆಕೆಯ ರೂಮ್‍ಮೇಟ್ ಖಾಸಗಿ ಆಸ್ಪತ್ರೆಗೆ ದಾಖಲಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಘಟನೆ ಕುರಿತಂತೆ ಪ್ರತಿಕ್ರಿಯಿಸಿರುವ ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ವೀಣಾ ಜಾರ್ಜ್ ಅವರು, ಕೊಚ್ಚಿಯಲ್ಲಿ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಘಟನೆ ಆಘಾತಕಾರಿಯಾಗಿದೆ. ಈ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಯುವತಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ನಿರ್ದೇಶನ ನೀಡಿದ್ದೇನೆ ಎಂದು ಹೇಳಿದ್ದಾರೆ.

Live Tv

Leave a Reply

Your email address will not be published. Required fields are marked *

Back to top button