ಬೆಂಗಳೂರು: ಸ್ಕೂಟಿಗೆ ಕಾಂಕ್ರೀಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಲಾಲ್ಬಾಗ್ ಬಳಿ ಇಂದು ಸಂಭವಿಸಿದೆ.
ಮೃತಳನ್ನು 19 ವರ್ಷದ ಪ್ರೀತಿ ಎಂದು ಗುರುತಿಸಲಾಗಿದೆ. ಪ್ರೀತಿ ಸುರಾನ ಕಾಲೇಜ್ ನಲ್ಲಿ ಫ್ರಥಮ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದರು. ಇಂದು ಪ್ರೀತಿ ಮತ್ತು ಲಾವಣ್ಯ ಸಹೋದರಿಯರಿಬ್ಬರು ಬೈಕಿನಲ್ಲಿ ಹೋಗುತ್ತಿದ್ದರು. ಲಾಲ್ಬಾಗ್ ಬಳಿ ಬರುತ್ತಿದ್ದಂತೆಯೇ ವೇಗವಾಗಿ ಬಂದ ಕಾಂಕ್ರೀಟ್ ಮಿಶ್ರಣ ಮಾಡುವ ಟ್ರಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಪ್ರೀತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
Advertisement
ಈ ಅಪಘಾತದಿಂದ 24 ವರ್ಷದ ಲಾವಣ್ಯಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ತೀವ್ರತೆಗೆ ಸ್ಕೂಟಿ ಸಂಪೂರ್ಣ ಜಖಂ ಆಗಿದ್ದು, ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದೆ.
Advertisement
ಪೋಷಕರು ಅಪಘಾತದಲ್ಲಿ ಸಾವನ್ನಪ್ಪಿದ್ದ ಪ್ರೀತಿಯ ಕಣ್ಣುದಾನ ಮಾಡಿದ್ದಾರೆ. ಈ ಮೂಲಕ ಪ್ರೀತಿ ಸಾವಿನಲ್ಲೂ ಕಣ್ಣುದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ವಿ.ವಿ. ಪುರಂ ಟ್ರಾಫಿಕ್ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು, ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.