
ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 191 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಈ ಮೂಲಕ ನಿನ್ನೆಗಿಂತ 43 ಪ್ರಕರಣ ಏರಿಕೆ ಕಂಡಿದೆ.
ಬೆಂಗಳೂರಿನಲ್ಲಿ ಅತಿ ಹೆಚ್ಚು 171 ಮತ್ತು ಮೈಸೂರಿನಲ್ಲಿ 14 ಪಾಸಿಟಿವ್ ಕೇಸ್ ದಾಖಲಾಗಿ ಏರಿಕೆಯತ್ತ ಮುಖಮಾಡಿದೆ. ನಿನ್ನೆ ಮೈಸೂರಿನಲ್ಲಿ 3 ಪ್ರಕರಣ ದಾಖಲಾಗಿತ್ತು. ಇಂದು 11 ಪ್ರಕರಣ ಹೆಚ್ಚಳಗೊಂಡಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 1.61ಕ್ಕೆ ಏರಿಕೆ ಕಂಡಿದ್ದು, ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,854ಕ್ಕೆ ತಲುಪಿದೆ. ಇಂದು ಕೂಡ ಶೂನ್ಯ ಮರಣ ಮುಂದುವರಿದಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,060 ಮರಣ ಪ್ರಕರಣ ಪತ್ತೆಯಾಗಿದ್ದು, ಕಳೆದ ಕೆಲ ತಿಂಗಳಿಂದ ಮರಣ ಪ್ರಕರಣ ಸ್ಥಿರತೆ ಕಾಯ್ದುಕೊಂಡಿದೆ. ಇಂದು 138 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಪೌರಕಾರ್ಮಿಕರ ಆರೋಗ್ಯಕ್ಕೆ ವಿಶೇಷ ಕಾಳಜಿ ಅಗತ್ಯ: ಡಾ.ಸಿಸ್ಟರ್ ಅರ್ಪಣಾ
ಈವರೆಗೆ ರಾಜ್ಯದಲ್ಲಿ ಒಟ್ಟು 39,48,283 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,06,327 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 41,448 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 11, ಸ್ಯಾಂಪಲ್ (ಆರ್ಟಿಪಿಸಿಆರ್ 7,909 + 3,921 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಇಟಲಿ ಹಾಗೂ ಕರ್ನಾಟಕದ ನಡುವಿನ ಬಾಂಧವ್ಯ ವೃದ್ಧಿಗೆ ಸಂಪೂರ್ಣ ಸಹಕಾರ: ಬೊಮ್ಮಾಯಿ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 171, ಮೈಸೂರು 14, ದಕ್ಷಿಣ ಕನ್ನಡ 2, ಚಿತ್ರದುರ್ಗ, ತುಮಕೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ತಲಾ ಒಂದೊಂದು ಸೇರಿ ಒಟ್ಟು 191 ಪ್ರಕರಣ ವರದಿಯಾಗಿದೆ.