ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಪಾಸಿಟಿವ್ ಕೇಸ್ಗಳ ಸಂಖ್ಯೆ 196ಕ್ಕೆ ಏರಿಕೆ ಕಂಡಿದೆ. ಈ ಪೈಕಿ ಬೆಂಗಳೂರಿನಲ್ಲಿ 175 ಪಾಸಿಟಿವ್ ಪ್ರಕರಣ ವರದಿಯಾಗಿದೆ.
ಬೆಂಗಳೂರು ಹೊರತು ಪಡಿಸಿ ಉಳಿದಂತೆ 11 ಜಿಲ್ಲೆಗಳಲ್ಲಿ 21 ಕೇಸ್ ಮತ್ತು 8 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇಂದು ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ಇಂದು 125 ಮಂದಿ ಗುಣಮುಖರಾಗಿ ಬೆಂಗಳೂರಿನ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 0.93 ದಾಖಲಾಗಿದ್ದು, ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,898ಕ್ಕೆ ತಲುಪಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,064 ಮರಣ ಪ್ರಕರಣ ಪತ್ತೆಯಾಗಿದೆ. ಕೆಲದಿನಗಳಿಂದ ಮರಣ ಪ್ರಕರಣ ಸ್ಥಿರವಾಗಿದೆ. ಇದನ್ನೂ ಓದಿ: PFI ರ್ಯಾಲಿಯಲ್ಲಿ ಪ್ರಚೋದನಕಾರಿ ಘೋಷಣೆ ಕೂಗಿದ ಬಾಲಕ ಸಹಿತ ತಂದೆ ವಶಕ್ಕೆ
ಈವರೆಗೆ ರಾಜ್ಯದಲ್ಲಿ ಒಟ್ಟು 39,51,498 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,09,494 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 51,585 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 21,036 ಸ್ಯಾಂಪಲ್ (ಆರ್ಟಿಪಿಸಿಆರ್ 15,769 + 5,267 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಸಂಜೆ 7 ರಿಂದ ಬೆಳಗ್ಗೆ 6 ರವರೆಗೆ ಮಹಿಳೆ ಉದ್ಯೋಗಿಗಳನ್ನು ದುಡಿಸುವಂತಿಲ್ಲ: ಯೋಗಿ ಆದೇಶ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 175, , ಬೆಂಗಳೂರು ಗ್ರಾಮಾಂತರ 5, ತುಮಕೂರು 4, ಧಾರವಾಡ 3, ಬೆಳಗಾವಿ 2, ಚಿತ್ರದುರ್ಗ 2, ಬಾಗಲಕೋಟೆ, ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ವಿಜಯಪುರದಲ್ಲಿ ತಲಾ ಒಂದೊಂದು ಪ್ರಕರಣ ಸೇರಿ ಒಟ್ಟು 196 ಪ್ರಕರಣ ವರದಿಯಾಗಿದೆ.