ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 197 ಕೊರೊನಾ ಪಾಸಿಟಿವ್ ಕೇಸ್ಗಳು ದಾಖಲಾಗಿದ್ದು, ಹಲವು ದಿನಗಳ ಬಳಿಕ 1 ಮರಣ ಪ್ರಕರಣ ವರದಿಯಾಗಿದೆ.
Advertisement
178 ಪಾಸಿಟಿವ್ ಪ್ರಕರಣಗಳು ಬೆಂಗಳೂರಿನಲ್ಲಿ ವರದಿಯಾಗಿದೆ. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,029 ಇದೆ. ಇಂದು 273 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ.1.11 ದಾಖಲಾಗಿದ್ದು, ರಾಜ್ಯದಲ್ಲಿ ಈವರೆಗೆ ಒಟ್ಟು 40,065 ಮರಣ ಪ್ರಕರಣ ಪತ್ತೆಯಾಗಿದೆ. ಇದನ್ನೂ ಓದಿ: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ
Advertisement
Advertisement
ಈವರೆಗೆ ರಾಜ್ಯದಲ್ಲಿ ಒಟ್ಟು 39,52,102 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,09,966 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 49,826 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 17,716 ಸ್ಯಾಂಪಲ್ (ಆರ್ಟಿ ಪಿಸಿಆರ್ 11,957 + 5,759 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಕೇಂದ್ರ ಪುರಸ್ಕೃತ ಯೋಜನೆಗಳ ಫಲಾನುಭವಿಗಳೊಂದಿಗೆ ಸಿಎಂ ವೀಡಿಯೋ ಸಂವಾದ
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 178, ಬೆಂಗಳೂರು ಗ್ರಾಮಾಂತರ 4, ಬೆಳಗಾವಿ 1, ಚಿಕ್ಕಬಳ್ಳಾಪುರ 1, ದಕ್ಷಿಣಕನ್ನಡ 4, ಹಾಸನ 1, ಮೈಸೂರು 4, ರಾಯಚೂರು 1, ರಾಮನಗರ 1, ಉತ್ತರಕನ್ನಡ 1 ಹಾಗೂ ವಿಜಯಪುರದಲ್ಲಿ 1 ಪ್ರಕರಣ ವರದಿಯಾಗಿದೆ.