Connect with us

Bengaluru City

1,977 ಹೊಸ ಕೊರೊನಾ ಪ್ರಕರಣ, 48 ಸಾವು – 3,188 ಜನ ಡಿಸ್ಚಾರ್ಜ್

Published

on

Share this

ಬೆಂಗಳೂರು: ರಾಜ್ಯದಲ್ಲಿ 1,977 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 48 ಮಂದಿ ಸಾವನ್ನಪ್ಪಿದ್ದಾರೆ. ಇಂದು ರಾಜ್ಯದಲ್ಲಿ 3,188 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸದ್ಯ ರಾಜ್ಯದಲ್ಲಿ 32,383 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಇಂದಿನವರೆಗೆ 28,78,564 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 36,037 ಮಂದಿ ಸಾವನ್ನಪ್ಪಿದ್ದಾರೆ.

ಸದ್ಯ ಕೋವಿಡ್-19 ಸೋಂಕು ಹರಡುವಿಕೆ ಪ್ರಮಾಣ ಶೇ.1.42 ಮತ್ತು ಮರಣ ಪ್ರಮಾಣ ಶೇ.2.42ರಷ್ಟಿದೆ. ಇವತ್ತು 1,38,274 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬೆಂಗಳೂರು ನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು ಮತ್ತು ಉಡುಪಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮೂರಂಕಿಯಲ್ಲಿ ದಾಖಲಾಗಿದೆ. 12 ಜಿಲ್ಲೆಗಳಲ್ಲಿ ಕೊರೊನಾದಿಂದ ಯಾವುದೇ ಸಾವು ಸಂಭವಿಸಿಲ್ಲ.

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 4, ಬಳ್ಳಾರಿ 5, ಬೆಳಗಾವಿ 94, ಬೆಂಗಳೂರು ಗ್ರಾಮಾಂತರ 56, ಬೆಂಗಳೂರು ನಗರ 462, ಬೀದರ್ 2, ಚಾಮರಾಜನಗರ 31, ಚಿಕ್ಕಬಳ್ಳಾಪುರ 27, ಚಿಕ್ಕಮಗಳೂರು 109, ಚಿತ್ರದುರ್ಗ 27, ದಕ್ಷಿಣ ಕನ್ನಡ 224, ದಾವಣಗೆರೆ 23, ಧಾರವಾಡ 12, ಗದಗ 2, ಹಾಸನ 158, ಹಾವೇರಿ 2, ಕಲಬುರಗಿ 8, ಕೊಡಗು 73, ಕೋಲಾರ 36, ಕೊಪ್ಪಳ 3, ಮಂಡ್ಯ 51, ಮೈಸೂರು 197, ರಾಯಚೂರು 4, ರಾಮನಗರ 16, ಶಿವಮೊಗ್ಗ 71, ತುಮಕೂರು 86, ಉಡುಪಿ 110, ಉತ್ತರ ಕನ್ನಡ 71, ವಿಜಯಪುರ 11 ಮತ್ತು ಯಾದಗಿರಿಯಲ್ಲಿ 2 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

Click to comment

Leave a Reply

Your email address will not be published. Required fields are marked *

Advertisement