Connect with us

Bengaluru City

ಪಾಸಿಟಿವಿಟಿ ರೇಟ್ ಶೇ.1.24ಕ್ಕೆ ಇಳಿಕೆ- 1,978 ಹೊಸ ಕೊರೊನಾ ಕೇಸ್, 56 ಸಾವು

Published

on

Share this

ಬೆಂಗಳೂರು: ಪಾಸಿಟಿವಿಟಿ ರೇಟ್‍ನಲ್ಲಿ ಮತ್ತಷ್ಟು ಇಳಿಕೆಯಾಗಿದ್ದು, ಇಂದು ಶೇ.1.24ರಷ್ಟು ದಾಖಲಾಗಿದೆ. ರಾಜ್ಯದಲ್ಲಿ 1,978 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 56 ಮಂದಿ ಸಾವನ್ನಪ್ಪಿದ್ದಾರೆ. 2,326 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸದ್ಯ ರಾಜ್ಯದಲ್ಲಿ 36,737 ಸಕ್ರಿಯ ಪ್ರಕರಣಗಳಿದ್ದು, ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.1.24 ಮತ್ತು ಮರಣ ಪ್ರಮಾಣ ಶೇ.2.83ರಷ್ಟಿದೆ. ಇದುವರೆಗೆ ರಾಜ್ಯದಲ್ಲಿ 35,835 ಮಂದಿ ಕೊರೊನಾಗೆ ಬಲಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 28,71,298ಕ್ಕೆ ಏರಿಕೆಯಾಗಿದೆ.

ಇಂದು ರಾಜ್ಯದಲ್ಲಿ ಒಟ್ಟು 1,58,898 ಸ್ಯಾಂಪಲ್ (ಆರ್‍ಟಿ ಪಿಸಿಆರ್ 1,30,763 + 28,135 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರಿನಲ್ಲಿ ಇಂದು 433 ಮಂದಿಗೆ ಕೊರೊನಾ ಸೋಂಕು ತಗುಲಿದೆ. 203 ಜನ ಇಂದು ಡಿಸ್ಚಾರ್ಜ್ ಆಗಿದ್ದಾರೆ. 8 ಮಂದಿ ಸಾವನ್ನಪ್ಪಿದ್ದು, ಸದ್ಯ ಸಿಲಿಕಾನ್ ಸಿಟಿಯಲ್ಲಿ 13,459 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ ಇದುವರೆಗೆ ಮಹಾಮಾರಿ 15,736 ಜನರನ್ನು ಬಲಿ ಪಡೆದುಕೊಂಡಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ?:
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 0, ಬಳ್ಳಾರಿ 6, ಬೆಳಗಾವಿ 112, ಬೆಂಗಳೂರು ಗ್ರಾಮಾಂತರ 64, ಬೆಂಗಳೂರು ನಗರ 433, ಬೀದರ್ 3, ಚಾಮರಾಜನಗರ 40, ಚಿಕ್ಕಬಳ್ಳಾಪುರ 16, ಚಿಕ್ಕಮಗಳೂರು 45, ಚಿತ್ರದುರ್ಗ 31, ದಕ್ಷಿಣ ಕನ್ನಡ 195, ದಾವಣಗೆರೆ 22, ಧಾರವಾಡ 30, ಗದಗ 4, ಹಾಸನ 132, ಹಾವೇರಿ 3, ಕಲಬುರಗಿ 16, ಕೊಡಗು 85, ಕೋಲಾರ 38, ಕೊಪ್ಪಳ 6, ಮಂಡ್ಯ 56, ಮೈಸೂರು 261, ರಾಯಚೂರು 3, ರಾಮನಗರ 11, ಶಿವಮೊಗ್ಗ 124, ತುಮಕೂರು 100, ಉಡುಪಿ 92, ಉತ್ತರ ಕನ್ನಡ 45, ವಿಜಯಪುರ 4 ಮತ್ತು ಯಾದಗಿರಿಯಲ್ಲಿ 1 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

Click to comment

Leave a Reply

Your email address will not be published. Required fields are marked *

Advertisement