ಬೆಂಗಳೂರು: ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕವಾಗಿದ್ದಾರೆ.
ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಹಾಲಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮೇ 31 ರಂದು ನಿವೃತ್ತ ಆದ ಬಳಿಕ ತೆರವಾಗುವ ಸ್ಥಾನಕ್ಕೆ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ.
Advertisement
ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆಯಾಗಿದ್ದಾರೆ.
Advertisement
Advertisement
ಮಹಿಳೆಯರ ದರ್ಬಾರ್: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಈ ಹಿಂದೆ 2000 ನೇ ಇಸವಿಯಲ್ಲಿ ತೆರೇಸಾ ಭಟ್ಟಾಚಾರ್ಯ, 2006 ನೇ ಇಸವಿಯಲ್ಲಿ ಮಾಲತಿ ದಾಸ್ ಹಾಗೂ 2017 ನೇ ಇಸವಿಯಲ್ಲಿ ಕೆ. ರತ್ನ ಪ್ರಭ ಅವರೂ ಅಲಂಕರಿಸಿದ್ದರು. ಇದನ್ನೂ ಓದಿ: ಗೆಳೆಯರ ರಕ್ತವನ್ನು ಮೈಗೆ ಮೆತ್ತಿಕೊಂಡು ಸತ್ತೋದಂತೆ ನಟಿಸಿದೆ – ಆಪ್ಪ ಅವನು ಮತ್ತೆ ಬರ್ತಾನೆ: ಶಾಕ್‍ಗೆ ಒಳಗಾದ ಬಾಲಕಿ
Advertisement
ಕೆ ರತ್ನ ಪ್ರಭ ಅವರ ಅಧಿಕಾರಾವಧಿಯಲ್ಲಿ ರಾಜ್ಯ ಪೋಲಿಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಹುದ್ದೆಯನ್ನು ನೀಲಮಣಿ ಎನ್ ರಾಜು ಅಲಂಕರಿಸಿದಾಗ ಎರಡು ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರೇ ಇದ್ದಾರೆ ಎಂಬುದು ಗಮನಾರ್ಹ ಅಂಶವಾಗಿತ್ತು.
ಇದೀಗ ವಂದಿತಾ ಶರ್ಮಾ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದೊಡನೆಯೇ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಇರುವ ಮೂರೂ ಪ್ರಮುಖ ಹುದ್ದೆಗಳನ್ನು ಮಹಿಳೆಯರೇ ಅಲಂಕರಿಸಿದಂತಾಗುತ್ತದೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಹಾಗೂ ರಾಜ್ಯ ವಿಧಾನ ಪರಿಷತ್ ಕಾರ್ಯದರ್ಶಿ ಕೆ ಆರ್ ಮಹಾಲಕ್ಷ್ಮಿ ಶಕ್ತಿ ಕೇಂದ್ರದ ಶಕ್ತಿಯಾಗಿ ಹೊಸ ದಾಖಲೆ ಸ್ಥಾಪಿಸಲಿದ್ದಾರೆ.
1986ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ವಂದಿತಾ ಶರ್ಮಾ ಹಾಲಿ ರಾಜ್ಯಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತಾಗಿದ್ದಾರೆ. ಮುಂದಿನ ವರ್ಷ ನವೆಂಬರ್ ವರೆಗೆ ಅಧಿಕಾರವಧಿ ಇರಲಿದೆ.