Bidar
ಬೀದರ್ನಲ್ಲಿ ಓರ್ವನ ಬಲಿಯೊಂದಿಗೆ ಶತಕ ಬಾರಿಸಿದ ಕೊರೊನಾ

ಬೀದರ್: ಗಡಿ ಜಿಲ್ಲೆ ಬೀದರ್ ನಲ್ಲಿ ಇಂದು ಓರ್ವ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದು, 119 ಜನರಿಗೆ ಸೋಂಕು ತಗುಲಿದೆ.
ಬಾಲ್ಕಿ ತಾಲೂಕಿನ 50 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆ ಹಾಗೂ ಜ್ವರದಿಂದ ಬಳಳಲುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ್ದು, ಇಂದು ಪರೀಕ್ಷೆ ನಡೆಸಿದಾಗ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದೆ.
ಓರ್ವನ ಬಲಿಯೊಂದಿಗೆ ಇಂದು ಜಿಲ್ಲೆಯಲ್ಲಿ 119 ಜನಕ್ಕೆ ಕೊರೊನಾ ಪಾಸಿಟಿವ್ ಧೃಡವಾಗಿದೆ. ಬೀದರ್ನಲ್ಲಿ 42, ಬಾಲ್ಕಿ 34, ಔರಾದ್ 17, ಹುಮ್ನಬಾದ್ 14, ಬಸವಕಲ್ಯಾಣದಲ್ಲಿ 12 ಜನಕ್ಕೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಪ್ರಾಥಮಿಕ ಹಾಗೂ ಕಂಟೈನ್ಮೆಂಟ್ ಏರಿಯಾ ಸಂಪರ್ಕದಿಂದಾಗಿ ಸೋಂಕು ತಗುಲಿದೆ.
ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3,577ಕ್ಕೆ ಏರಿಕೆಯಾಗಿದೆ. ಇದರಲ್ಲಿ 2,505 ಜನ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 960 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ 108 ಜನರನ್ನು ಮಹಾಮಾರಿ ಬಲಿ ಪಡೆದಿದೆ. ಅನ್ಯ ಕಾರಣದಿಂದಾಗಿ 4 ಜನ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಸ್ಪಷ್ಟ ಪಡಿಸಿದೆ.
