ಟೆಲ್ ಅವಿವ್: ಹಮಾಸ್ ಬಂಡುಕೋರ (Hamas Militants) ಸಂಘಟನೆ 199 ಜನರನ್ನು ಒತ್ತೆಯಾಳಾಗಿ ಇಟ್ಟುಕೊಂಡಿದೆ ಎಂದು ಇಸ್ರೇಲಿ (Israel) ಮಿಲಿಟರಿ ವಕ್ತಾರ ಡೇನಿಯಲ್ ಹಗರಿ ಮಾಧ್ಯಮ ಸಭೆಯಲ್ಲಿ ಹೇಳಿದ್ದಾರೆ.
ಇದಕ್ಕೂ ಮೊದಲು ಭಾನುವಾರ ಸುದ್ದಿಗೋಷ್ಠಿ ನಡೆಸಿದ್ದ ಅವರು, 155 ಜನರನ್ನು ಹಮಾಸ್ ಒತ್ತೆಯಾಳಾಗಿ ಇಟ್ಟುಕೊಂಡಿದೆ ಎಂದು ಆರೋಪಿಸಿದ್ದರು. ಅಕ್ಟೋಬರ್ 7ರಂದು ಹಮಾಸ್ ರಾಕೆಟ್ ದಾಳಿ ನಡೆಸಿದ ಬಳಿಕ ಅಕ್ರಮವಾಗಿ ಇಸ್ರೇಲ್ ಗಡಿಯನ್ನು ನುಸುಳಿದೆ. ಇಲ್ಲಿ ಜನರ ಹತ್ಯೆ ಮಾಡುವುದಲ್ಲದೇ ಮಹಿಳೆಯರು ಮಕ್ಕಳು ಸೇರಿದಂತೆ ಇಸ್ರೇಲಿ ಪ್ರಜೆಗಳನ್ನು (Citizens) ಒತ್ತೆಯಾಳಾಗಿ ಇಟ್ಟುಕೊಂಡಿದೆ ಎಂದು ಡೇನಿಯಲ್ ಹಗರಿ ವಿವರಿಸಿದರು. ಇದನ್ನೂ ಓದಿ: ಮಿಷನ್ ಗಗನಯಾನ; ಅ.21 ಕ್ಕೆ ಮೊದಲ ಪರೀಕ್ಷಾರ್ಥ ಉಡಾವಣೆ
ಯುದ್ಧ ಆರಂಭವಾದ ಬಳಿಕ ಗುಂಡು ಹಾರಿಸಿ, ಇರಿದು ಮತ್ತು ಸುಟ್ಟು 1,400 ಕ್ಕೂ ಜನರನ್ನು ಹಮಾಸ್ ಹತ್ಯೆ ಮಾಡಿದೆ. ಏಳು ದಿನಗಳ ನಿರಂತರ ಬಾಂಬ್ ದಾಳಿಯು ಹಮಾಸ್ ನೆಲೆಗಳನ್ನು ನಾಶಪಡಿಸಿದೆ. ಎರಡೂ ಕಡೆಗಳಲ್ಲಿ ಒಟ್ಟು 3,000 ಜೀವಗಳನ್ನು ಯುದ್ಧ ಬಲಿ ತೆಗೆದುಕೊಂಡಿದೆ. ಇದನ್ನೂ ಓದಿ: ತೆಲಂಗಾಣ ಚುನಾವಣೆ – ‘ಕೈ’ ಪ್ರಣಾಳಿಕೆಯಲ್ಲಿ ವಧುವಿಗೆ 10 ಗ್ರಾಂ ಚಿನ್ನ, ಮಕ್ಕಳಿಗೆ ಉಚಿತ ಇಂಟರ್ನೆಟ್?
ಯುದ್ಧ ಉಲ್ಬಣಗೊಳ್ಳುತ್ತಿದ್ದಂತೆ ಇಸ್ರೇಲಿ ಸೈನ್ಯವು ಗಾಜಾ ಪಟ್ಟಿಯ (Gaza Stripe) ಉತ್ತರದಲ್ಲಿ 1.1 ಮಿಲಿಯನ್ ಪ್ಯಾಲೆಸ್ತೀನಿಯಾದವರಿಗೆ ಸ್ಥಳಾಂತರಿಸುವ ಆದೇಶಗಳನ್ನು ನೀಡಿತು. ಅದರ 2.4 ಮಿಲಿಯನ್ ಜನಸಂಖ್ಯೆಯ ಸರಿಸುಮಾರು ಅರ್ಧದಷ್ಟು ಜನರು ತಮ್ಮ ಸುರಕ್ಷತೆಗಾಗಿ ದಕ್ಷಿಣದ ಕಡೆಗೆ ಚಲಿಸುವಂತೆ ಒತ್ತಾಯಿಸಿದೆ ಎಂದರು. ಇದನ್ನೂ ಓದಿ: ದೆಹಲಿಗೆ ಬರ್ತಿದ್ದಂತೆ ಎಲ್ಲ ಭಾರ ಇಳಿದು ನೆಮ್ಮದಿ ಸಿಕ್ಕಿತು: ಇಸ್ರೇಲ್ ಯುದ್ಧ ಭೀಕರತೆ ಬಿಚ್ಚಿಟ್ಟ ಕನ್ನಡಿಗರು
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]