ಬೆಂಗಳೂರು: ಸೂರ್ಯನನ್ನು ಅಧ್ಯಯನ ಮಾಡುವ ಭಾರತದ ಮೊದಲ ಬಾಹ್ಯಾಕಾಶ-ಆಧಾರಿತ ಮಿಷನ್ ಆದಿತ್ಯ-ಎಲ್ 1 (Aditya L1) ಬಾಹ್ಯಾಕಾಶ ನೌಕೆಯು ಸೂರ್ಯನ ಪೂರ್ಣ ಚಿತ್ರಣವನ್ನು ಸೆರೆಹಿಡಿದಿದೆ.
Aditya-L1 Mission:
The SUIT payload captures full-disk images of the Sun in near ultraviolet wavelengths
The images include the first-ever full-disk representations of the Sun in wavelengths ranging from 200 to 400 nm.
They provide pioneering insights into the intricate details… pic.twitter.com/YBAYJ3YkUy
— ISRO (@isro) December 8, 2023
ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆಯಲ್ಲಿರುವ ಸೌರ ನೇರಳಾತೀತ ಇಮೇಜಿಂಗ್ ಟೆಲಿಸ್ಕೋಪ್ (ಸೋಲಾರ್ ಅಲ್ಟ್ರಾ ವಯೊಲೆಟ್ ಇಮೇಜ್ ಟೆಲಿಸ್ಕೋಪ್- SUIT) ಸೂರ್ಯನ ಡಿಸ್ಕ್‌ನ ಆರಂಭಿಕ ಸಂಪೂರ್ಣ ಚಿತ್ರಗಳನ್ನು ಸೆರೆಹಿಡಿಯುವ ಶ್ಲಾಘನೀಯ ಸಾಧನೆಯನ್ನು ಮಾಡಿದ್ದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಈ ಮಾಹಿತಿಯನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.
- Advertisement
- Advertisement
ಸೂರ್ಯನನ್ನು ನೇರಳಾತೀತ ವರ್ಣಪಟಲದೊಳಗೆ ವೀಕ್ಷಿಸಲು ವಿನ್ಯಾಸಗೊಳಿಸಲಾದ ಮಹತ್ವದ ಸಾಧನವಾಗಿರುವ SUIT ಪೇಲೋಡ್ ಅನ್ನು ಕಳೆದ ತಿಂಗಳು ನವೆಂಬರ್ 20 ರಂದು ಸಕ್ರಿಯಗೊಳಿಸಲಾಗಿದೆ. ಇದು ಸೂರ್ಯನ ಕ್ರೋಮೋಸ್ಪಿಯರ್ ಮತ್ತು ಪರಿವರ್ತನೆಯ ಪ್ರದೇಶದ ಪರೀಕ್ಷೆಯಲ್ಲಿ ಸಹಾಯ ಮಾಡುತ್ತದೆ.
ಸೂರ್ಯಶಿಕಾರಿಗೆ ಹೊರಟಿರುವ ಆದಿತ್ಯ-ಎಲ್1 ಮಿಷನ್ ಮೂಲಕ ಸೂರ್ಯನ ಮೊದಲ ಪೂರ್ಣ-ಡಿಸ್ಕ್ ಚಿತ್ರಗಳನ್ನು ಸೆರೆಹಿಡಿಯಲಾಗಿದೆ ಎಂದು ಇಸ್ರೋ ತಿಳಿಸಿದೆ. ಫೋಟೋಗಳು – ಸಮೀಪದ ನೇರಳಾತೀತ ತರಂಗಾಂತರಗಳಲ್ಲಿ – ಸೂರ್ಯನ ದ್ಯುತಿಗೋಳ ಮತ್ತು ವರ್ಣಗೋಳದ ಸಂಕೀರ್ಣ ವಿವರಗಳಿಗೆ ಪ್ರವರ್ತಕ ಒಳನೋಟಗಳನ್ನು ಒದಗಿಸುತ್ತವೆ ಎಂದು ಇಸ್ರೋ ಎಕ್ಸ್ ಖಾತೆಯಲ್ಲಿ ತಿಳಿಸಿದೆ.
ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯಲ್ಲಿರುವ ಸೌರ ನೇರಳಾತೀತ ಇಮೇಜಿಂಗ್ ಟೆಲಿಸ್ಕೋಪ್ ಅಥವಾ SUIT ಉಪಕರಣವು 200-400 nm (ನ್ಯಾನೋಮೀಟರ್) ತರಂಗಾಂತರ ವ್ಯಾಪ್ತಿಯಲ್ಲಿ ಚಿತ್ರಗಳನ್ನು ಸೆರೆಹಿಡಿದಿದೆ. ವಿವಿಧ ವೈಜ್ಞಾನಿಕ ಶೋಧಕಗಳನ್ನು ಬಳಸಿಕೊಂಡು ಈ ತರಂಗಾಂತರ ವ್ಯಾಪ್ತಿಯಲ್ಲಿ ಸೂರ್ಯನ ದ್ಯುತಿಗೋಳ ಮತ್ತು ವರ್ಣಗೋಳದ ಚಿತ್ರಗಳನ್ನು SUIT ಸೆರೆಹಿಡಿಯುತ್ತದೆ ಎಂದು ಇಸ್ರೋ ಹೇಳಿಕೆಯಲ್ಲಿ ತಿಳಿಸಿದೆ.
ಸೆಪ್ಟೆಂಬರ್ 2 ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ (SDSC-SHAR) ಆದಿತ್ಯ-L1 ಏಳು ಪೇಲೋಡ್‌ಗಳೊಂದಿಗೆ ಉಡಾವಣೆಗೊಂಡಿತ್ತು. TL1I ಭೂಮಿಯಿಂದ ಸುಮಾರು 15 ಲಕ್ಷ ಕಿಮೀ ದೂರದಲ್ಲಿರುವ L1 ಪಾಯಿಂಟ್ ಕಡೆಗೆ ಭೂ ಕಕ್ಷೆಯಿಂದ ಬಾಹ್ಯಾಕಾಶ ನೌಕೆಯನ್ನು ಕಳುಹಿಸಿತ್ತು.