ನವದೆಹಲಿ: ರಫೇಲ್ ಯುದ್ಧ ವಿಮಾನ ವಿಜಯದಶಮಿ ದಿನವಾದ ಇಂದು ಭಾರತಕ್ಕೆ ಹಸ್ತಾಂತರಗೊಂಡಿದೆ.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮೂರು ದಿನಗಳ ಕಾಲ ಫ್ರಾನ್ಸ್ ಪ್ರವಾಸ ಕೈಗೊಂಡಿದ್ದಾರೆ. ಈ ವೇಳೆ ಪ್ಯಾರಿಸ್‍ನ ಬೊರಾಡೆಕ್ಸ್ ಸಮೀಪದ ಮೆರಿಗ್ನ್ಯಾಕ್ ವಾಯು ನೆಲೆಯಲ್ಲಿ ರಫೇಲ್ ಯುದ್ಧ ವಿಮಾನಕ್ಕೆ ಪೂಜೆ ಮಾಡುವ ಮೂಲಕ ಬರಮಾಡಿಕೊಂಡರು.
Advertisement
ಭಾರತ ಖರೀದಿಸುತ್ತಿರುವ 36 ರಫೇಲ್ ಯುದ್ಧ ವಿಮಾನಗಳ ಪೈಕಿ ಒಂದು ವಿಮಾನವನ್ನು ಮಾತ್ರ ಫ್ರಾನ್ಸ್ ಹಸ್ತಾಂತರಿಸಿದೆ. ಉಳಿದಂತೆ ಮೊದಲ ಹಂತದಲ್ಲಿ ನೀಡಲಾಗುವ ನಾಲ್ಕು ವಿಮಾನಗಳು 2020ರ ಮೇ ತಿಂಗಳಲ್ಲಿ ಭಾರತಕ್ಕೆ ಬರಲಿವೆ.
Advertisement
— Rajnath Singh (@rajnathsingh) October 8, 2019
Advertisement
ರಫೇಲ್ ವಿಶೇಷತೆ ಏನು?
ಎರಡು ಎಂಜಿನ್, ಎರಡು ಸೀಟ್ ಗಳನ್ನು ಹೊಂದಿರುವ ವಿಮಾನ ಗಂಟೆಗೆ ಗರಿಷ್ಟ 2 ಸಾವಿರ ಕಿ.ಮೀ ವೇಗದಲ್ಲಿ ಹಾರಾಟ ನಡೆಸಬಲ್ಲದು. 9,500 ಕೆಜಿ ತೂಕದ ಈ ವಿಮಾನ 9,500 ಕೆಜಿ ತೂಕದ ಶಸ್ರ್ತಾಸ್ತ್ರಗಳನ್ನು ಹೊತ್ತುಕೊಂಡು ಹೋಗುವ ಸಾಮರ್ಥ್ಯವನ್ನು ಹೊಂದಿದೆ. ಈ ವಿಮಾನ ಇಳಿಯಲು ಮತ್ತು ಹಾರಾಟಕ್ಕೆ 400 ಮೀಟರ್ ಉದ್ದದ ರನ್‍ವೇ ಅಗತ್ಯವಿಲ್ಲ.
Advertisement
ವೈರಿಗಳನ್ನು ಗುರುತಿಸಲು ರಫೇಲ್ ವಿಮಾನದಲ್ಲಿ ಸ್ಪೆಕ್ಟ್ರಾ ಸಿಸ್ಟಂ ಇದೆ. ಥೇಲ್ಸ್ ಗ್ರೂಪ್ ಈ ಸ್ಪೆಕ್ಟ್ರಾ ಸಿಸ್ಟಂ ಅನ್ನು ಅಭಿವೃದ್ಧಿ ಪಡಿಸಿದೆ. ರೇಡಿಯೋ ಫಿಕ್ವೆನ್ಸಿ, ರೇಡಾರ್ ವಾರ್ನಿಂಗ್ ರಿಸೀವರ್, ಲೇಸರ್ ವಾರ್ನಿಂಗ್, ಮಿಸೈಲ್ ವಾರ್ನಿಂಗ್, ರೇಡಾರ್ ಜಾಮರ್ ಗಳನ್ನು ಸ್ಪೆಕ್ಟ್ರಾ ಸಿಸ್ಟಂ ನಲ್ಲಿರುವ ಸೆನ್ಸರ್ ಗಳು ಗ್ರಹಿಸುತ್ತವೆ. 1800 ಕಿ.ಮಿ ವ್ಯಾಪ್ತಿ ವಿರೋಧಿಗಳ ಕಾರ್ಯ ಚಟುವಟಿಕೆಯನ್ನು ಗ್ರಹಿಸುವ ಸಾಮರ್ಥ್ಯ ಹೊಂದಿದೆ. ಈ ಕಾರಣಕ್ಕಾಗಿಯೇ ರಫೇಲ್ ವಿಮಾನ ಬೇರೆ ಯುದ್ಧ ವಿಮಾನಗಳಿಗಿಂತ ಭಿನ್ನವಾಗಿ ಗುರುತಿಸಿಕೊಂಡಿದೆ.
ವೈರಿಗಳ ನೆಲೆಯ ಮೇಲೆ 100 ಕಿ.ಮೀ. ಎತ್ತರದಿಂದಲೇ ದಾಳಿ ಮಾಡುವ ಸಾಮರ್ಥ್ಯ ರಫೇಲ್ ಯುದ್ಧ ವಿಮಾನಕ್ಕಿದೆ. ಜೊತೆಗೆ 50,000 ಅಡಿ ಎತ್ತರದಲ್ಲಿ ಹಾಡುವ ಸಾಮರ್ಥ್ಯ ಹೊಂದಿದೆ.
Mérignac(France): Defence Minister Rajnath Singh performs 'Shastra Puja', on the Rafale combat jet officially handed over to India. https://t.co/emOeslAt5e pic.twitter.com/M7SHuSBcD2
— ANI (@ANI) October 8, 2019
ಡಸಾಲ್ಟ್ ಕಂಪನಿ 1986ರಲ್ಲಿ ಮೊದಲ ರಫೇಲ್ ವಿಮಾನವನ್ನು ನಿರ್ಮಿಸಿದ್ದು, ಭಾರತ ಅಲ್ಲದೇ ಈಜಿಪ್ಟ್, ಕತಾರ್ ದೇಶಗಳು ರಫೇಲ್ ಖರೀದಿ ಸಂಬಂಧ ಡಸಾಲ್ಟ್ ಕಂಪನಿಯ ಜೊತೆ ಮಾತುಕತೆ ನಡೆಸಿವೆ.
ಯಾವ ದೇಶ ಏನು ಬೇಡಿಕೆ ಇಡುತ್ತದೋ ಆ ಬೇಡಿಕೆಗೆ ಅನುಗುಣವಾಗಿ ಡಸಾಲ್ಟ್ ಕಂಪನಿ ರಫೇಲ್ ವಿಮಾನವನ್ನು ಅಭಿವೃದ್ಧಿ ಪಡಿಸುತ್ತದೆ. ಲೋ ಬ್ಯಾಂಡ್ ಜಾಮರ್, 10 ಗಂಟೆಗಳ ಹಾರಾಟ ಮಾಹಿತಿ ಸಂಗ್ರಹ, ಇಸ್ರೇಲಿ ಹೆಲ್ಮೆಟ್ ಮೌಂಟೆಡ್ ಡಿಸ್ಪ್ಲೇ, ರೆಡಾರ್ ವಾರ್ನಿಂಗ್ ಇನ್ಫ್ರಾರೆಡ್ ಶೋಧ ಮತ್ತು ಟ್ರ್ಯಾಕಿಂಗ್ ಸೇರಿದಂತೆ ಹಲವು ಅತ್ಯಾಧುನಿಕ ಉಪಕರಣಗಳ ಹಾಗೂ ಸೌಲಭ್ಯಗಳನ್ನು ಅಳವಡಿಸಬೇಕೆಂದು ಭಾರತ ಬೇಡಿಕೆ ಇಟ್ಟಿದ್ದು, ಈ ಬೇಡಿಕೆಗೆ ಅನುಗುಣವಾಗಿ ರಫೇಲ್ ವಿಮಾನ ತಯಾರಾಗುತ್ತಿದೆ.
Mérignac(France): Defence Minister Rajnath Singh takes official handover of Rafale combat aircraft pic.twitter.com/SVIs39sAvF
— ANI (@ANI) October 8, 2019
ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಗಂಭೀರವಾಗಿ ಆರೋಪಿಸಿತ್ತು. 2019ರ ಲೋಕಸಭಾ ಚುನಾವಣೆಯಲ್ಲಿಯೂ ಇದನ್ನೇ ಅಸ್ತ್ರವಾಗಿ ಬಳಸಿಕೊಂಡು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಷ್ಟೇ ಅಲ್ಲದೆ ಚೌಕಿದಾರ್ ಚೋರ್ ಹೈ ಎಂದು ಸುಪ್ರೀಂಕೋರ್ಟ್ ಹೇಳಿದೆ ಅಂತ ರಾಹುಲ್ ಗಾಂಧಿ ಚುನಾವಣಾ ಪ್ರಚಾರದ ವೇಳೆ ಹೇಳಿದ್ದರು. ಈ ವಿಚಾರವಾಗಿ ಬಿಜೆಪಿ ಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ಬಳಿಕ ರಾಹುಲ್ ಗಾಂಧಿ ಸುಪ್ರೀಂಕೋರ್ಟ್ ಮುಂದೆ ವಿಷಾಧ ವ್ಯಕ್ತಪಡಿಸಿದ್ದರು.