ಗಾಂಧಿನಗರ: ಕೊರೊನಾ ಲಸಿಕೆಯ ಎರಡನೇ ಡೋಸ್ ಪಡೆದ ಬಳಿಕವೂ ಗುಜರಾತ್‍ನಲ್ಲಿ ಆರೋಗ್ಯ ಅಧಿಕಾರಿಗೆ ಕೊರೊನಾ ಪಾಸಿಟಿವ್ ಬಂದಿರುವ ಕುರಿತು ಅಧಿಕಾರಿಗಳು ತಿಳಿಸಿದ್ದಾರೆ.
Advertisement
ಗಾಂಧಿನಗರದ ದೇಹ್ಗಮ್ ತಾಲೂಕಿನ ಆರೋಗ್ಯಾಧಿಕಾರಿ ಜನವರಿ 16ರಂದು ಮೊದಲ ಡೋಸ್ ವ್ಯಾಕ್ಸಿನ್ ಪಡೆದಿದ್ದರು. ಫೆಬ್ರವರಿ 15ರಂದು 2ನೇ ಡೋಸ್ ಲಸಿಕೆ ಪಡೆದಿದ್ದಾರೆ. ಬಳಿಕ ಅವರಿಗೆ ಜ್ವರ ಸೇರಿದಂತೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದು, ಟೆಸ್ಟ್ ಮಾಡಿಸಿದಾಗ ಫೆಬ್ರವರಿ 20ರಂದು ಪಾಸಿಟಿವ್ ಬಂದಿದೆ ಎಂದು ಗಾಂಧಿನಗರದ ಮುಖ್ಯ ಆರೋಗ್ಯಾಧಿಕಾರಿ ಡಾ.ಎಂ.ಎಚ್.ಸೋಲಂಕಿ ತಿಳಿಸಿದ್ದಾರೆ.
Advertisement
ಕೊರೊನಾ ಪಾಸಿಟಿವ್ ಬಂದ ಅಧಿಕಾರಿಯನ್ನು ಹೋಮ್ ಐಸೋಲೇಶನ್‍ನಲ್ಲಿ ಇರಿಸಲಾಗಿದ್ದು, ಸಣ್ಣ ಪ್ರಮಾಣದ ಲಕ್ಷಣಗಳನ್ನು ಹೊಂದಿದ್ದಾರೆ. ಸೋಮವಾರದಿಂದ ಕೆಲಸಕ್ಕೆ ಆಗಮಿಸಲು ಸಿದ್ಧವಿರುವುದಾಗಿ ಅವರು ತಿಳಿಸಿದ್ದಾರೆ ಎಂದು ಸೋಲಂಕಿ ಹೇಳಿದ್ದಾರೆ.
Advertisement
Advertisement
ಎರಡೂ ಡೋಸ್ ವ್ಯಾಕ್ಸಿನ್ ಪಡೆದ ಬಳಿಕ ರೋಗ ನಿರೋಧಕ ಶಕ್ತಿ ವೃದ್ಧಿಸಲು ಸಾಮಾನ್ಯವಾಗಿ 45 ದಿನಗಳ ಕಾಲಾವಕಾಶ ಬೇಕು ಎಂದು ಸಿಎಚ್‍ಓ ಮಾಹಿತಿ ನೀಡಿದ್ದಾರೆ. ಹೀಗಾಗಿ ವ್ಯಾಕ್ಸಿನ್ ಪಡೆದ ಬಳಿಕವೂ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಅವರು ತಿಳಿಸಿದ್ದಾರೆ.