ಹಾಸನ: ಎರಡು ಬೈಕ್‍ಗಳ ಮುಖಾಮುಖಿ ಡಿಕ್ಕಿಯಿಂದಾಗಿ ಕೇವಲ ಒಂದು ವರ್ಷದ ಹಿಂದಷ್ಟೆ ವಿವಾಹವಾಗಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ, ಅರಸೀಕೆರೆ ತಾಲೂಕಿನ, ಬೀರನಹಳ್ಳಿ ಸಮೀಪ ನಡೆದಿದೆ.
29 ವರ್ಷದ ಶಶಿಕುಮಾರ್ ಮೃತ ದುರ್ದೈವಿ. ಶಶಿಕುಮಾರ್ ತಂದೆಯೊಂದಿಗೆ ಬೈಕ್‍ನಲ್ಲಿ ಹೋಗುವಾಗ ಮತ್ತೊಂದು ಬೈಕ್‍ಗೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಶಶಿಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಂದು ಬೈಕಿನವರು ಸ್ಥಳದಿಂದ ಪರಾರಿಯಾಗಿದ್ದಾರೆ.
ಶಶಿಕುಮಾರ್ ತಂದೆಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಶಿಕುಮಾರ್ ಕಳೆದ ಒಂದು ವರ್ಷದ ಹಿಂದಷ್ಟೇ ಮದುವೆಯಾಗಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಹೊಳೆನರಸೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.