ಬಳ್ಳಾರಿ: ಇಲ್ಲಿನ ಸೈಬರ್ ಕ್ರೈಮ್ ಇತಿಹಾಸದಲ್ಲಿ ಸೈಬರ್ ಪೋಲಿಸರು (Bellary Cyber Police) ಅತಿದೊಡ್ಡ ಭೇಟೆಯಾಡಿದ್ದು, ಮಧ್ಯಪ್ರದೇಶದವರೆಗೂ (Madhya Pradesh) ಹೋಗಿ ಕೋಟಿ ಕೋಟಿ ವಂಚನೆ ಮಾಡಿದ್ದ ಆರೋಪಿಯನ್ನ ಖೆಡ್ಡಕ್ಕೆ ಕೆಡುವುದರಲ್ಲಿ ಸಫಲರಾಗಿದ್ದಾರೆ. ನಕಲಿ ಈ ಮೇಲ್ ಬಳಸಿ ಕಲ್ಲಿದ್ದಲು ಸರಬರಾಜು ಕಂಪನಿಗೆ 2 ಕೋಟಿ 11 ಲಕ್ಷದ 50 ಸಾವಿರ ರೂ. ವಂಚಿಸಿದ್ದ ಮಧ್ಯಪ್ರದೇಶ ಮೂಲದ ಆರೋಪಿ ಅಜಯ್ ಕುಮಾರ್ ಜೈಸ್ವಾಲ್ ಹಣದ ಸಮೇತ ಅರೆಸ್ಟ್ ಆಗಿದ್ದಾನೆ.
ಬಳ್ಳಾರಿಯ (Bellary) ಹಿಂದೂಸ್ತಾನ್ ಕ್ಯಾಲ್ಸೀನ್ಡ್ ಮೆಟಲ್ ಪ್ರೈವೇಟ್ ಲಿಮಿಟೆಟ್ ಕಂಪನಿ ಅಗರ್ವಾಲ್ ಕೋಲ್ ಕಾರ್ಪೋರೇಷನ್ ಕಂಪನಿಯಿಂದ ಕಲ್ಲಿದ್ದಲು ಖರೀದಿಸಿತ್ತು. ಹೀಗಾಗಿ ಹಿಂದುಸ್ತಾನ್ ಕಂಪನಿ ಅಗರ್ವಾಲ್ ಕಂಪನಿಗೆ 2.11 ಕೋಟಿ ರೂ. ಕೊಡಬೇಕಿತ್ತು. ಆರೋಪಿ ಅಜಯ್ ಕುಮಾರ್ ಜೈಸ್ವಾಲ್ ಇದರ ಬಗ್ಗೆ ಮಾಹಿತಿ ಪಡೆದಿದ್ದ. ಅಗರ್ವಾಲ್ ಕಂಪನಿಯ ನಕಲಿ ಇ-ಮೇಲ್ ಕ್ರಿಯೇಟ್ ಮಾಡಿ ಕಂಪನಿಯ ಬ್ಯಾಂಕ್ ಅಕೌಂಟ್ ನಂಬರ್ ಚೇಜ್ ಆಗಿದೆ ಅಂತಾ ಹಿಂದುಸ್ತಾನ್‌ಗೆ ಕಳಿಸಿದ್ದ. ಹೀಗಾಗಿ ಹಿಂದುಸ್ತಾನ್ ಕಂಪನಿಯವರು ಅಜಯ್ ಕುಮಾರ್ ಜೈಸ್ವಾಲ್ ಕಳಿಸಿದ್ದ ಅಕೌಂಟ್ ನಂಬರ್‌ಗೆ ಹಣ ಹಾಕಿದ್ದರು. ಅನುಮಾನ ಬರಬಾರದು ಅನ್ನೋ ಕಾರಣಕ್ಕೆ ತನ್ನ ಖಾತೆಗೆ ಬಂದ ಹಣವನ್ನ ಇತರೆ 18 ಖಾತೆಗಳಿಗೆ ಹಾಕಿ ಡ್ರಾ ಮಾಡಿದ್ದ. ಇದನ್ನೂ ಓದಿ: ಶಿರೂರು ಗುಡ್ಡ ಕುಸಿತ ದುರಂತ: ಮತ್ತೆ ಶವಗಳಿಗೆ ಶೋಧ – ಕಾರವಾರ ಬಂದರಿಗೆ ಡ್ರಜ್ಜಿಂಗ್ ಬೋಟ್!
ವಂಚನೆ ಕುರಿತು ಸೆಪ್ಟೆಂಬರ್ 3 ರಂದು ಹಣ ವಂಚನೆ ಗೊತ್ತಾಗಿ, ಬಳ್ಳಾರಿ ಸೈಬರ್ ಠಾಣೆಗೆ ಹಿಂದೂಸ್ತಾನ್ ಕಂಪನಿಯಿಂದ ದೂರು ದಾಖಲಿಸಲಾಗಿತ್ತು. ಕೂಡಲೇ ಬಳ್ಳಾರಿ ಎಸ್ಪಿ ಶೊಭಾರಾಣಿ ಅವರಿಂದ ಪ್ರಕರಣ ಭೇದಿಸಲು ಸೈಬರ್ ಕ್ರೈಮ್ ಡಿಎಸ್‌ಪಿ ಸಂತೋಷ್ ನೇತೃತ್ವದ ತಂಡ ರಚನೆ ಮಾಡಿದ್ರು. ಕೆವೈಸಿ ಹಾಗೂ ಹಣ ವರ್ಗಾವಣೆಯಾದ ಖಾತೆ ಜಾಡು ಹಿಡಿದು ಮಧ್ಯಪ್ರದೇಶದ ಸಿದ್ದಿ ಜಿಲ್ಲೆಯಲ್ಲಿ ಅಡಗಿದ್ದ ಆರೋಪಿಯನ್ನ ಬಂಧಿಸಿದ್ದು, ಬಂಧಿತ ಆರೋಪಿಯಿಂದ 1 ಕೋಟಿ, 21 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ.
ಅಲ್ಲದೇ ಆರೋಪಿ ಬೇರೆ ಬೇರೆ ಖಾತೆಗೆ ಹಾಕಿದ್ದ 27.97 ಲಕ್ಷ ಹಣ ಫ್ರೀಜ್ ಮಾಡಿಸಿದ್ದಾರೆ. ಇನ್ನೂ ಆರೋಪಿ ಅಜಯ್ ಕುಮಾರ್ ಜೈಸ್ವಾಲ್ ಹಿಂದೆ ದೆಹಲಿ ಮೂಲದ ಕುಖ್ಯಾತ ವ್ಯಕ್ತಿಯ ಕೈವಾಡ ಶಂಕೆ ಇದೆ ಎನ್ನಲಾಗಿದ್ದು, ಪೊಲೀಸರ ತನಿಖೆ ಚುರುಕುಗೊಳಿಸಿದ್ದಾರೆ. ಇದನ್ನೂ ಓದಿ: ಇಂದಿನಿಂದ ಭಾರತ v/s ಬಾಂಗ್ಲಾ ಟೆಸ್ಟ್ ಸರಣಿ ಶುರು – ವರ್ಕೌಟ್ ಆಗುತ್ತಾ ಗಂಭೀರ್ ಪ್ಲ್ಯಾನ್?