ಧಾರವಾಡ: ಲೋಕಾಯುಕ್ತ ಪೊಲೀಸರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಎಇಇ ಗೋವಿಂದ ಭಜಂತ್ರಿ ಮನೆ ಮೇಲೆ ಇಂದು (ಮಂಗಳವಾರ) ದಾಳಿ ನಡೆಸಿದ್ದರು. ಈ ವೇಳೆ ಅಧಿಕಾರಿ ಬಳಿ ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ.
ಬೆಳಗ್ಗೆಯಿಂದ ನಡೆದ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆಯಲ್ಲಿ 2.34 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ. ಧಾರವಾಡ (Dharawada) ನಿವಾಸ ಸೇರಿ ಒಟ್ಟು 7 ಕಡೆ ಪರಿಶೀಲನೆ ನಡೆಸಿದ ಅಧಿಕಾರಿಗಳು 2.34 ಮೌಲ್ಯದ ಅಕ್ರಮ ಆಸ್ತಿ ಪತ್ತೆ ಮಾಡಿದ್ದಾರೆ. ಇದನ್ನೂ ಓದಿ: ಗಗನಯಾತ್ರಿ ಸುನಿತಾ ವಿಲಿಯಮ್ಸ್ ಆರೋಗ್ಯ ಕ್ಷೀಣ
Advertisement
Advertisement
ಇದರಲ್ಲಿ 1.85 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ, 57 ಲಕ್ಷ ರೂ. ಮೌಲ್ಯದ ಸೈಟ್, 1.2 ಕೋಟಿ ರೂ. ಮೌಲ್ಯದ ಮನೆ, 7 ಎಕರೆ ಜಮೀನು ಇರುವ ಸ್ಥಿರಾಸ್ತಿ, 41.11 ಲಕ್ಷ ರೂ. ನಗದು ಸಹಿತ 94.22 ಲಕ್ಷ ರೂ. ಮೌಲ್ಯದ ಚರಾಸ್ತಿ ಪತ್ತೆಯಾಗಿದೆ. 27.11 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣ, 20 ಲಕ್ಷ ರೂ. ಮೌಲ್ಯದ ಎರಡು ವಾಹನಗಳು ಪತ್ತೆಯಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ಖಚಿತ ಪಡಿಸಿದ್ದಾರೆ. ಇದನ್ನೂ ಓದಿ: Ballari | ಬಿಸಿ ಊಟ ಸೇವಿಸಿ 45 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
Advertisement