ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮನೆಯಲ್ಲಿ 2.50 ಲಕ್ಷ ರೂ. ಕಳ್ಳತನ!

Public TV
1 Min Read
gurukiran 1

ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ (Gurukiran) ಅವರ ಬೆಂಗಳೂರು ನಿವಾಸದಲ್ಲಿ ಕಳ್ಳತನವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

GURUKIRAN

ಕಳೆದ ಡಿಸೆಂಬರ್ 31ರಂದು ಮಧ್ಯಾಹ್ನ ತಮ್ಮ ರೂಂನ ಬೀರುವಿನಲ್ಲಿಟ್ಟಿದ್ದ 2.50 ಲಕ್ಷ ರೂ.ಗಳನ್ನು ಗುರುಕಿರಣ್ ಅತ್ತೆ ಕಸ್ತೂರಿ ಶೆಟ್ಟಿ ಇಟ್ಟಿದ್ದರು. ಆದ್ರೆ ಜನವರಿ 5ರಂದು ಹಣ ಕಳ್ಳತನವಾಗಿದೆ. ಎರಡು ದಿನಗಳ ಕಾಲ ಕುಟುಂಬಸ್ಥರು ಮನೆಯೆಲ್ಲ ಹುಡುಕಾಡಿದ್ದಾರೆ.

ಎಷ್ಟು ಹುಡುಕಾಡಿದರೂ ಹಣ ಸಿಗದೇ ಇದ್ದಾಗ ಜನವರಿ 7 ರಂದು ಚಂದ್ರಲೇಔಟ್ ಪೊಲೀಸ್ ಠಾಣೆಗೆ (Chandra Layout Police Station) ಗುರುಕಿರಣ್ ಅತ್ತೆ ದೂರು ನೀಡಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯ ಸೀತಾಮಾತೆಗೆ ಸೂರತ್‌ನಲ್ಲಿ ಸಿದ್ಧಗೊಂಡಿದೆ ಸ್ಪೆಷಲ್ ಸೀರೆ – ವಿಶೇಷತೆ ಏನು?

ಈ ಸಂಬಂಧ ಎಫ್‌ಐಆರ್ ಸಹ ದಾಖಲಾಗಿದೆ. ಮನೆ ಕೆಲಸದವರ ಮೇಲೆ ಕಸ್ತೂರಿ ಶೆಟ್ಟಿ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ, ಸದ್ಯ ಮನೆ ಕೆಲಸದಾಕೆ ರತ್ನಮ್ಮ ಅವರನ್ನು ವಿಚಾರಣೆ ನಡೆಸಿರುವ ಚಂದ್ರಲೇಔಟ್ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಸುಧಾರಣಾ ಕ್ರಮವಾಗಿ ‘ಅರ್ಜಿ ಸಲ್ಲಿಕೆಯೊಂದಿಗೆ ಪರಿಶೀಲನೆ’ ವ್ಯವಸ್ಥೆ ಜಾರಿ – ವಾಟ್ಸಪ್ ಸಂದೇಶಕ್ಕೆ ಮೊಬೈಲ್ ಆ್ಯಪ್ 

Share This Article