ಬೆಳಗಾವಿ: ಇಲ್ಲಿನ ಸಿಸಿಬಿ ಪೊಲೀಸರು (Belagavi CCB Police) ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2.73 ಕೋಟಿ ರೂ. ಹಣ ಜಪ್ತಿ ಮಾಡಲಾಗಿದೆ.
ಮಹಾರಾಷ್ಟ್ರದ ಸಾಂಗಲಿಯಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಗೂಡ್ಸ್ ವಾಹನದಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ವಾಹನ ಚಾಲಕನನ್ನು ವಶಕ್ಕೆ ಪಡೆದು ಹಣ ಜಪ್ತಿ (Money seized) ಮಾಡಿದ್ದಾರೆ. ಇದನ್ನೂ ಓದಿ: Chattisgarh | ಅಬುಜ್ಮಾರ್ ಎನ್‌ಕೌಂಟರ್‌ನಲ್ಲಿ 38 ಮಾವೋವಾದಿಗಳ ಹತ್ಯೆ
ಮಹಾರಾಷ್ಟ್ರದ ಸಾಂಗಲಿ ಪಟ್ಟಣದ ಸಚೀನ ಮೇನಕುದುಳೆ, ಮಾರುತಿ ಮಾರಗುಡೆ ಎಂಬ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ತಲೆ ಸೀಳಿದ ಬುಲೆಟ್, ಬೆರಳು ಕಟ್; ಭೀಕರ ಹತ್ಯೆಯಾದ ಹಮಾಸ್ ಮುಖ್ಯಸ್ಥನ ದೇಹ ಸ್ಥಿತಿ ಹೇಗಿತ್ತು?
ಹಣ ಸಾಗಾಟ ಮಾಡಲು ಗೂಡ್ಸ್ ವಾಹನದ ಕ್ಯಾಬಿನನ್ನೇ ಮಾಡಿಫೈ ಮಾಡಿದ್ದಾರೆ. ಜಪ್ತಿಯಾದ ಹಣದ ಮೂಲ ಯಾವುದು ಎಂದು ತನಿಖೆ ನಡೆಸುತ್ತಿರುವುದಾಗಿ ಡಿಸಿಪಿ ರೋಹನ್ ಜಗದೀಶ್ ಮಾಹಿತಿ ನೀಡಿದ್ದಾರೆ. ಬೆಳಗಾವಿ ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಈ ಕುರಿತು ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದೆ. ಇದನ್ನೂ ಓದಿ: ಮತ್ತೆ 3 ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ – ಬೆಂಗಳೂರಿಂದ ಮುಂಬೈಗೆ ಹೊರಟಿದ್ದ ಫ್ಲೈಟ್‌ಗೂ ಥ್ರೆಟ್ ಕಾಲ್