ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಕಲಕೋಟ್ ಅರಣ್ಯದಲ್ಲಿ ಉಗ್ರರು (Terrorists) ಹಾಗೂ ಸೇನೆಯ (Indian Army) ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾ ಅಧಿಕಾರಿಗಳು ಮತ್ತು ಒಬ್ಬ ಯೋಧ ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಓರ್ವ ಯೋಧ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ.
ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಗುಪ್ತಚರ ಮಾಹಿತಿ ಬಳಿಕ ಸೇನೆಯ ವಿಶೇಷ ಪಡೆಗಳು ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಈ ವೇಳೆ ಭಯೋತ್ಪಾದಕರು ಹಾಗೂ ಸೇನೆಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಇದನ್ನೂ ಓದಿ: ಆಸ್ಟ್ರೇಲಿಯಾಗೆ ಬಂದಿಳಿದ ಚಾಂಪಿಯನ್ ಪ್ಯಾಟ್ ಕಮ್ಮಿನ್ಸ್- ಸ್ವಾಗತಿಸಲು ಜನವೇ ಇಲ್ಲ
Advertisement
Advertisement
ಪಿರ್ ಪಂಜಾಲ್ ಅರಣ್ಯದಲ್ಲಿ ಕಳೆದ ಕೆಲವು ವರ್ಷಗಳಲ್ಲಿ ಸರಣಿ ಎನ್‍ಕೌಂಟರ್‌ಗಳು ನಡೆದಿದೆ. ಇಲ್ಲಿನ ದಟ್ಟ ಅರಣ್ಯದ ಲಾಭ ಪಡೆದುಕೊಂಡು ಭಯೋತ್ಪಾದಕರು ಅಡಗು ತಾಣಗಳನ್ನು ಮಾಡಿಕೊಂಡಿದ್ದಾರೆ. ಅಲ್ಲದೇ ಪರ್ವತಗಳಲ್ಲಿಯೂ ಭಯೋತ್ಪಾದಕರು ಆಶ್ರಯ ಪಡೆದುಕೊಂಡಿದ್ದಾರೆ. ಈ ಪ್ರದೇಶ ಭದ್ರತಾ ಪಡೆಗಳಿಗೆ ಸವಾಲಾಗಿದೆ.
Advertisement
Advertisement
ಕಳೆದ ವಾರ ರಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಓರ್ವ ಭಯೋತ್ಪಾದಕನನ್ನು ಹತ್ಯೆಗೈದಿದ್ದವು. ಇದನ್ನೂ ಓದಿ: 2025 ರೊಳಗೆ ರಕ್ತಹೀನತೆ ಮುಕ್ತ ಆರೋಗ್ಯ ಕರ್ನಾಟಕ ರೂಪಿಸುವ ಗುರಿ: ದಿನೇಶ್ ಗುಂಡೂರಾವ್