ಶ್ರೀನಗರ: ಫೈರಿಂಗ್ ರೇಂಜ್(ಶೂಟಿಂಗ್ ವ್ಯಾಪ್ತಿ)ನಲ್ಲಿ ಆಕಸ್ಮಿಕವಾಗಿ ಸ್ಫೋಟವಾದ ಹಿನ್ನೆಲೆ ಇಬ್ಬರು ಸೇನಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ.
Advertisement
ಪೂಂಚ್ ಜಿಲ್ಲೆಯ ಜುಲ್ಲಾಸ್ ಪ್ರದೇಶದಲ್ಲಿ ಸೈನಿಕರು ಮತ್ತು ಅವರ ಸಹೋದ್ಯೋಗಿಗಳು ಫೈರಿಂಗ್ ರೇಂಜ್ನಲ್ಲಿ ತರಬೇತಿ ಪಡೆಯುತ್ತಿದ್ದರು. ಅದೇ ರೀತಿ ಇಂದು ಸಹ ತರಬೇತಿಯನ್ನು ಪಡೆಯುತ್ತಿದ್ದ ವೇಳೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಫೈರಿಂಗ್ ರೇಂಜ್ನಲ್ಲಿ ಆಕಸ್ಮಿಕ ಸ್ಫೋಟ ಕಾಣಿಸಿಕೊಂಡಿದೆ. ಇದನ್ನೂ ಓದಿ: ನಿದ್ದೆಯಿಂದ ಎಬ್ಬಿಸಿದಕ್ಕೆ ಪೊಲೀಸರನ್ನ ಅಸಭ್ಯವಾಗಿ ನಿಂದಿಸಿದ ವ್ಯಕ್ತಿಗೆ 1.7 ವರ್ಷ ಜೈಲು ಶಿಕ್ಷೆ
Advertisement
Advertisement
ಘಟನೆ ವೇಳೆ ಪಕ್ಕದಲ್ಲಿಯೇ ಸೈನಿಕರಿದ್ದು, ಇಬ್ಬರಿಗೆ ಗಾಯವಾಗಿದೆ. ಪರಿಣಾಮ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.