Friday, 20th July 2018

Recent News

ಉಗ್ರರ ಎನ್ ಕೌಂಟರ್ ಗೆ ಇಬ್ಬರು ಯೋಧರು ಹುತಾತ್ಮ, ಮೂವರಿಗೆ ಗಾಯ

ಶ್ರೀನಗರ: ಜಮ್ಮು-ಕಾಶ್ಮೀರದ ಶೋಪಿಯಾನ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭಾರತೀಯ ಸೇನಾ ಯೋಧರು ಮತ್ತು ಉಗ್ರರ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಕ್ಯಾಪ್ಟನ್ ಸೇರಿ ಮೂವರು ಗಾಯಗೊಂಡಿದ್ದಾರೆ.

ಜಿಲ್ಲೆಯ ಝೈನಪೋರಾ ಪ್ರದೇಶದ ಅವನೀರಾ ಪ್ರದೇಶದಲ್ಲಿ ಉಗ್ರರ ಇರುವಿಕೆಯ ಮಾಹಿತಿಯಿಂದ ಯೋಧರು ಶನಿವಾರದಿಂದಲೇ ಕಾರ್ಯಾಚರಣೆ ನಡೆಸಿದ್ದರು ಅಂತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವೇಳೆ ಸೈನಿಕರು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಗುಂಡಿನ ಚಕಮಕಿಯಲ್ಲಿ ಐವರು ಯೋಧರು ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇದರಲ್ಲಿ ಇಬ್ಬರು ಯೋಧರು ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ ಅಂತ ಅವರು ಮಾಹಿತಿ ನೀಡಿದ್ದಾರೆ.

ಇನ್ನೊಂದೆಡೆ ಬಂಡೀಪುರ ಜಿಲ್ಲೆಯ ಸೊಪೊರ್ ಗಡಿ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಸೇನಾ ಪಡೆಗಳು ಕಾರ್ಯಾಚರಣೆಗಿಳಿದಿದ್ದರು. ಈ ವೇಳೆ ಯೋಧರು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ಯೋಧರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಸೇನಾ ಹಿರಿಯ ಅಧಿಕಾರಿಗಳು ತಿಳಿಸಿದರು.

Leave a Reply

Your email address will not be published. Required fields are marked *