ಬೆಂಗಳೂರು: ಬೇಬಿ ಕೇರ್‌ನಲ್ಲಿ (Bengaluru Daycare) ಮಕ್ಕಳ ಮೇಲೆ ದೈಹಿಕ ಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಂಜುಳಾ, ವಿಜಯಲಕ್ಷ್ಮೀ ಆರೋಪಿಗಳನ್ನು ಹೆಚ್‌ಎಎಲ್ ಪೊಲೀಸರು ಬಂಧಿಸಿದ್ದಾರೆ. ಉಳಿದ ಮೂವರು ಆರೋಪಿಗಳಾದ ಭವಾನಿ, ಸಿಂಧು, ಬಿಂದು ಎಂಬವರ ಪಾತ್ರ ಮೇಲ್ನೋಟಕ್ಕೆ ಇಲ್ಲ ಅನ್ನೋದು ಖಾತರಿಯಾಗಿದೆ. ಹಾಗಾಗಿ, ಇಂದು ಮತ್ತೆ ವಿಚಾರಣೆಗೆ ಬರಲು ಮೂವರು ಆರೋಪಿಗಳಿಗೆ ನೋಟಿಸ್ ನೀಡಲಾಗಿದೆ. ಇದನ್ನೂ ಓದಿ: ಬೇಬಿ ಕೇರ್‌ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ಆರೋಪ – ಮೂವರು ಸಿಬ್ಬಂದಿಗೆ ನೋಟಿಸ್
ಇಬ್ಬರನ್ನು ಬಂಧಿಸಿ ಬೆಳಗ್ಗೆ ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರುಪಡಿಸಿದರು. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಜಡ್ಜ್ ಆದೇಶಿಸಿದ್ದಾರೆ.
ಏನಿದು ಪ್ರಕರಣ?
ಬೆಂಗಳೂರಿನ (Bengaluru) ಬ್ರೂಕ್ ಫೀಲ್ಡ್ನಲ್ಲಿರುವ ಬೇಬಿ ಕೇರ್ ಸೆಂಟರ್‌ನಲ್ಲಿ ಮಕ್ಕಳಿಗೆ ದೈಹಿಕವಾಗಿ ಚಿತ್ರಹಿಂಸೆ ನೀಡಿ ವಿಕೃತಿ ಮೆರೆದಿದ್ದರು. ಇದನ್ನು ತಿಳಿದ ಮಕ್ಕಳ ಸಹಾಯವಾಣಿ ಅಧಿಕಾರಿಗಳು ಮಕ್ಕಳ ಮೇಲೆ ಆಯಾಗಳು ಕ್ರೌರ್ಯ ಮೆರೆದಿರುವ ವೀಡಿಯೋ ಪರಿಶೀಲನೆ ಮಾಡಿ, ಐವರು ಆಯಾಗಳ ಮೇಲೆ ಹೆಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಅದರನ್ವಯ ಮಂಜುಳ, ವಿಜಯಲಕ್ಷ್ಮೀ, ಭವಾನಿ, ಸಿಂಧು, ಬಿಂದು ಸೇರಿ ಐವರ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಇದನ್ನೂ ಓದಿ: ರೇಣುಕಾಸ್ವಾಮಿ ಕೇಸ್‌ನ ಸಾಕ್ಷಿಗೆ ಬೆದರಿಕೆ – ತನಿಖೆ ವೇಳೆ ಕೆಲ ವಿಚಾರಗಳು ಬೆಳಕಿಗೆ
