ರಾಯಚೂರು: ಸ್ನೇಹಿತನಿಗೆ ಬೈದಿದ್ದನ್ನು ಪ್ರಶ್ನಿಸಿದ್ದಕ್ಕೆ ಗಲಾಟೆ ಮಾಡಿ, ಯುವಕನನ್ನು ಹತ್ಯೆಗೈದಿರುವ ಘಟನೆ ರಾಯಚೂರಿನ (Raichuru) ಜಹೀರಾಬಾದ್‌ನ ಮಾವಿನ ಕೆರೆ ಬಳಿ ನಡೆದಿದೆ.
22 ವರ್ಷದ ವಿಶಾಲ್ ಕೊಲೆಯಾದ ಯುವಕನಾಗಿದ್ದು, ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಆರೋಪಿಗಳನ್ನು ರಾಜು ಹಾಗೂ ಬಸವರಾಜ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಮುಡಾ ಹಗರಣ | ಸಿಎಂ ಆಪ್ತ ಮರೀಗೌಡಗೆ ಇಡಿ ಶಾಕ್ – 20 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು
ಶುಕ್ರವಾರ (ಜ.23) ತಡರಾತ್ರಿ 1 ಗಂಟೆ ಸುಮಾರಿಗೆ ಮೃತ ಯುವಕ ಸ್ನೇಹಿತನನ್ನ ಬೈದಿದ್ದಕ್ಕೆ ಆರೋಪಿಗಳ ಬಳಿ ಪ್ರಶ್ನೆ ಮಾಡಿದ್ದಾನೆ. ಈ ವೇಳೆ ಮೂವರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಬಳಿಕ ಇಬ್ಬರು ಆರೋಪಿಗಳು ಮನಬಂದAತೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ.
ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಶವಾಗಾರಕ್ಕೆ ಭೇಟಿ ನೀಡಿ, ಪರಿಶೀಲನೆ ಮಾಡಿದ್ದಾರೆ.
ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದಾರೆ. ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಿದ್ದಾರೆ. ಇನ್ನೂ ಕೊಲೆಗೆ ಬಳಸಿದ ಚಾಕುವನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಸದರ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಯಾವ್ದೇ ದಾಳಿಯನ್ನ ಪೂರ್ಣ ಯುದ್ಧವಾಗಿ ಪರಿಗಣಿಸುತ್ತೇವೆ, ಕಠಿಣ ರೀತಿಯಲ್ಲೇ ಉತ್ತರ ಕೊಡ್ತೀವಿ: ಇರಾನ್ ಎಚ್ಚರಿಕೆ

