ಲಕ್ನೋ: ಮದರಸಾ ಬಿಟ್ಟು ಓಡಿ ಹೋಗಬಾರದೆಂದು ಇಬ್ಬರು ಬಾಲಕರ ಕಾಲಿಗೆ ಮೌಲಾನಾ ಕಬ್ಬಿಣದ ಸರಪಳಿಯನ್ನು ಕಟ್ಟಿ ಕೂಡಿಹಾಕಿದ್ದಾರೆ ಎಂಬ ಆರೋಪ ಉತ್ತರ ಪ್ರದೇಶದ ಲಕ್ನೋದಲ್ಲಿ ಕೇಳಿಬಂದಿದೆ.
ಸ್ಥಳೀಯರೊಬ್ಬರು ಈ ವೀಡಿಯೋವನ್ನು ಸೆರೆ ಹಿಡಿದು ಪೊಲೀಸರಿಗೆ ಕಳುಹಿಸಿದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಆದರೆ ಮೌಲಾನಾ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳಲು ಬಯಸುವುದಿಲ್ಲ ಎಂದು ಬಾಲಕರ ಪೋಷಕರು ಲಿಖಿತ ಅರ್ಜಿ ಸಲ್ಲಿಸಿದ್ದಾರೆ.
ಓದುವುದರಿಂದ ತಪ್ಪಿಸಿಕೊಳ್ಳಲು ತಮ್ಮ ಮಕ್ಕಳು ಹಲವು ಬಾರಿ ಓಡಿಹೋಗಲು ಪ್ರಯತ್ನಿಸುತ್ತಿದ್ದರು. ಇದರಿಂದಾಗಿ ಮೌಲಾನಾ ಮಕ್ಕಳೊಂದಿಗೆ ಕಟ್ಟುನಿಟ್ಟಾಗಿ ವರ್ತಿಸುತ್ತಿದ್ದರು ಎಂದು ಪೋಷಕರು ಪೊಲೀಸರಿಗೆ ತಿಳಿಸಿದ್ದಾರೆ. ಇದನ್ನೂ ಓದಿ: PFI ರ್‍ಯಾಲಿಯಲ್ಲಿ ಪ್ರಚೋದನಕಾರಿ ಘೋಷಣೆ – 18 ಮಂದಿ ಅರೆಸ್ಟ್
ಓದಲು ಬಾರದ ಕಾರಣ ಮಕ್ಕಳು ಓಡಿಹೋಗಲು ಯತ್ನಿಸುತ್ತಿದ್ದರು. ಅಲ್ಲದೇ ಓದುವುದರಿಂದ ತಪ್ಪಿಸಿಕೊಳ್ಳಲು ಓರ್ವ ಬಾಲಕ ಶೌಚಾಲಯದಲ್ಲಿ ಅಡಗಿ ಕುಳಿತುಕೊಂಡಿದ್ದನು ಎಂದು ಹೇಳಿದರು. ಇದನ್ನೂ ಓದಿ: ಸಾಕ್ಷ್ಯಾಧಾರಗಳ ಕೊರತೆ- ಆರ್ಯನ್ ಖಾನ್ ಸೇರಿ 6 ಮಂದಿಗೆ ಎನ್‍ಸಿಬಿ ಕ್ಲೀನ್‌ಚಿಟ್