ಫಿರೋಜಾಬಾದ್: ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿ, ಇಬ್ಬರು ಮಕ್ಕಳು, ಮಹಿಳೆ ಸೇರಿದಂತೆ ಐವರು ಸಾವನ್ನಪ್ಪಿದ್ದು ಹಲವು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಫಿರೋಜಾಬಾದ್ (Firozabad) ಜಿಲ್ಲೆಯಲ್ಲಿ ನಡೆದಿದೆ.
ಶಿಕೋಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ನೌಶೇರಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಸೋಮವಾರ ರಾತ್ರಿ 10:30ರ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮಾಗಡಿಯಲ್ಲಿ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ – ಒಂದೇ ಕುಟುಂಬದ ಐವರು ದುರ್ಮರಣ
ಮಾಹಿತಿ ಪ್ರಕಾರ ಚಂದ್ರಪಾಲ್ ಎಂಬವರ ಖಾಲಿ ಮನೆಯಲ್ಲಿ ಪಟಾಕಿ ವ್ಯಾಪಾರಿಯೊಬ್ಬರು ಬಾಡಿಗೆ ಪಡೆದು ಪಟಾಕಿ ವ್ಯಾಪಾರ ಮಾಡುತ್ತಿದ್ದರು. ಅದರಲ್ಲಿ ಭಾರೀ ಪ್ರಮಾಣದ ಗನ್ ಪೌಡರು ಶೇಖರಿಸಲಾದ್ದು ಅದರಿಂದ ಸ್ಫೋಟ ಸಂಭವಿಸಿದೆ. ಇದರಿಂದಾಗಿ ಮನೆ ಮೇಲ್ಛಾವಣಿ ಕುಸಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಡೀಸೆಲ್ ಟ್ಯಾಂಕರ್, ಲಾರಿ ಡಿಕ್ಕಿ – ಇಬ್ಬರು ಟೋಲ್ ಸಿಬ್ಬಂದಿ ಸೇರಿ ಮೂವರಿಗೆ ಗಂಭೀರ ಗಾಯ
ಮೃತರನ್ನು ಮೀರಾದೇವಿ(52), ಅಮನ್(20), ಗೌತಮ್ ಕುಶ್ವಾಹ(18), ಇಚ್ಛಾ ಕುಮಾರಿ(03) ಮತ್ತು ಅಭಿನೇಯ (1.5) ವರ್ಷ ಎಂದು ಗುರುತಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಅಗ್ನಿಶಾಮಕ, ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ತಂಡ ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆ ತ್ವರಿತಗತಿಯಲ್ಲಿ ನಡೆಯುತ್ತಿದೆ ಎಂದು ಫಿರೋಜಾಬಾದ್ ಜಿಲ್ಲಾ ಮ್ಯಾಜಿಸ್ಟ್ರೇಟ್ ರಮೇಶ್ ರಂಜನ್ ತಿಳಿಸಿದ್ದಾರೆ. ಇದನ್ನೂ ಓದಿ: ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ