ಹೈದರಾಬಾದ್: ಭಾರೀ ಮಳೆಯಿಂದಾಗಿ ಮೂರು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಕದಿರಿ ಪಟ್ಟಣದಲ್ಲಿ ನಡೆದಿದೆ.
ಶನಿವಾರ ಮುಂಜಾನೆ 3 ಗಂಟೆ ಸುಮಾರಿಗೆ ಕಟ್ಟಡ ಕುಸಿದಿದ್ದು, ಕಟ್ಟಡ ಅವಶೇಷಗಳ ಅಡಿಯಲ್ಲಿ ಕೆಲವು ನಿವಾಸಿಗಳು ಸಿಲುಕಿಕೊಂಡಿದ್ದಾರೆ. ಇದೀಗ ಆರು ಮಂದಿಯನ್ನು ರಕ್ಷಿಸಲಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸ್ ಅಧಿಕಾರಿಗಳು ಆಗಮಿಸಿ, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಭಾರೀ ಮಳೆಯಿಂದಾಗಿ ಇಂದು ಅಯ್ಯಪ್ಪನ ದರ್ಶನವಿಲ್ಲ
Advertisement
Advertisement
ಶುಕ್ರವಾರ ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಮೂರು ರಾಯಲಸೀಮಾ ಜಿಲ್ಲೆಗಳು ಮತ್ತು ಆಂಧ್ರಪ್ರದೇಶದ ಒಂದು ದಕ್ಷಿಣ ಕರಾವಳಿ ಜಿಲ್ಲೆಗಳಲ್ಲಿ 20 ಸೆಂ.ಮೀ ರಷ್ಟು ಭಾರೀ ಮಳೆ ಸುರಿದಿದೆ. ಅಲ್ಲದೇ ಶುಕ್ರವಾರ ಸುರಿದ ಭಾರೀ ಮಳೆಗೆ ಕನಿಷ್ಠ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಚುನಾವಣೆಯಲ್ಲಿ ಗೆಲ್ಲುವವರೆಗೂ ರಾಜ್ಯ ವಿಧಾನಸಭೆಗೆ ಕಾಲಿಡಲ್ಲ: ಎನ್.ಚಂದ್ರಬಾಬು ನಾಯ್ಡು ಪ್ರತಿಜ್ಞೆ
Advertisement
Advertisement
ರಾಜ್ಯದ ಪರಿಸ್ಥಿತಿ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ದೂರವಾಣಿ ಕರೆ ಮೂಲಕ ಮಾತನಾಡಿದ್ದು, ರಾಜ್ಯಕ್ಕೆ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಇನ್ನೂ ಜಗನ್ ಮೋಹನ್ ರೆಡ್ಡಿ ಅವರು ಶನಿವಾರ ಪ್ರವಾಹ ಪೀಡಿತ ಜಿಲ್ಲೆಗಳ ವೈಮಾನಿಕ ಸಮೀಕ್ಷೆಯನ್ನು ಕೈಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.